1 Chronicles 9:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇಸ್ರೇಲ್ ಜನರ ಎಲ್ಲಾ ಹೆಸರುಗಳು ಅವರವರ ವಂಶಾವಳಿ ಪಟ್ಟಿಯಲ್ಲಿ ಬರೆಯಲ್ಪಟ್ಟಿದೆ. ಈ ವಂಶಾವಳಿಗಳು ಇಸ್ರೇಲ್ ರಾಜರ ಇತಿಹಾಸದಲ್ಲಿ ಸೇರಿಸಲ್ಪಟ್ಟಿದೆ. ಯೆಹೂದ ಪ್ರಾಂತ್ಯದ ಜನರನ್ನು ಸೆರೆಹಿಡಿದು ಬಾಬಿಲೋನಿಗೆ ಒಯ್ಯಲಾಯಿತು. ಅವರು ದೇವರಿಗೆ ಅವಿಧೇಯರಾದ್ದರಿಂದ ಅವರಿಗೆ ಇಂಥ ಸ್ಥಿತಿ ಬಂದೊದಗಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಎಲ್ಲಾ ಇಸ್ರಾಯೇಲರನ್ನು ಅವರ ಕುಟುಂಬಗಳಿಗೆ ಅನುಗುಣವಾಗಿ ವಂಶಾವಳಿಯಲ್ಲಿ ಉಲ್ಲೇಖಿಸಲಾಗಿದೆ. ಅವರ ಹೆಸರುಗಳು ಇಸ್ರಾಯೇಲರ ಅರಸರ ಪುಸ್ತಕದಲ್ಲಿ ದಾಖಲಾಗಿದೆ. ಯೆಹೂದ್ಯರು ದೇವದ್ರೋಹಿಗಳಾದುದರಿಂದ ಬಾಬಿಲೋನಿಗೆ ಸೆರೆಯವರಾಗಿ ಹೋಗಬೇಕಾಯಿತು.
Kannada BSI Bible 2016
ಹೀಗೆಯೇ ಇಸ್ರಾಯೇಲಿನವರೆಲ್ಲರೂ ವಂಶಾವಳಿಗಳ ಪ್ರಕಾರ ಲೆಕ್ಕಿಸಲ್ಪಟ್ಟಿದ್ದರು. ಇಗೋ, ತಮ್ಮ ಅಪರಾಧಗಳ ನಿಮಿತ್ತ ಬಾಬೆಲಿಗೆ ಸೆರೆಯಾಗಿ ಒಯ್ಯಲ್ಪಟ್ಟ ಇಸ್ರಾಯೇಲ್‌ ಯೆಹೂದಗಳ ಅರಸರ ಪುಸ್ತಕದಲ್ಲಿ ಬರೆಯಲ್ಪಟ್ಟಿವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಎಲ್ಲಾ ಇಸ್ರಾಯೇಲ್ಯರು ವಂಶಾವಳಿಗಳಲ್ಲಿ ಲಿಖಿತರಾದರು; ಅವರ ಹೆಸರುಗಳು ಇಸ್ರಾಯೇಲ್ಯರ ಅರಸರ ಪುಸ್ತಕದಲ್ಲಿ ಬರೆದಿರುತ್ತವೆ. ಯೆಹೂದ್ಯರು ದೇವದ್ರೋಹಿಗಳಾದದರಿಂದ ಬಾಬೆಲಿಗೆ ಸೆರೆಯವರಾಗಿ ಹೋಗಬೇಕಾಯಿತು.
Kannada Bible (KNCL) BSI 2016
ಇಸ್ರಯೇಲಿನ ಎಲ್ಲಾ ಜನರನ್ನು ಅವರ ಕುಟುಂಬಗಳಿಗೆ ಅನುಗುಣವಾಗಿ ಪಟ್ಟಿಮಾಡಲಾಗಿದೆ. ಈ ಮಾಹಿತಿ ‘ಇಸ್ರಯೇಲಿನ ಅರಸರ ಪುಸ್ತಕ’ದಲ್ಲಿ ದಾಖಲಾಗಿದೆ. ಯೆಹೂದ್ಯರು ತಮ್ಮ ಪಾಪಕ್ಕೆ ಶಿಕ್ಷೆಯಾಗಿ ಬಾಬಿಲೋನಿಗೆ ಸೆರೆಯಾಳುಗಳಾಗಿ ಹೋಗಬೇಕಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ರಾಯೇಲಿನ ಎಲ್ಲಾ ಜನರನ್ನು ಅವರ ಕುಟುಂಬಗಳಿಗೆ ಅನುಗುಣವಾಗಿ ಪಟ್ಟಿಮಾಡಲಾಗಿದೆ. ಈ ಮಾಹಿತಿ ಇಸ್ರಾಯೇಲಿನ ಅರಸರ ಪುಸ್ತಕದಲ್ಲಿ ದಾಖಲಾಗಿದೆ. ಯೆಹೂದ್ಯರು ದ್ರೋಹಿಗಳಾದದರಿಂದ ಬಾಬೆಲಿಗೆ ಸೆರೆಯವರಾಗಿ ಹೋಗಬೇಕಾಯಿತು.