1 Chronicles 9:33 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಗಾಯಕರು ಮತ್ತು ತಮ್ಮ ಕುಟುಂಬಗಳಿಗೆ ನಾಯಕರಾಗಿದ್ದ ಲೇವಿಯರು ದೇವಾಲಯದ ಕೋಣೆಗಳಲ್ಲಿ ಇರುತ್ತಿದ್ದರು. ಅವರು ಇತರ ಕೆಲಸಗಳನ್ನು ಮಾಡಬೇಕಾಗಿರಲಿಲ್ಲ; ಯಾಕೆಂದರೆ ದೇವಾಲಯದ ಹಗಲಿರುಳಿನ ಕೆಲಸಕಾರ್ಯಗಳ ಜವಾಬ್ದಾರಿಕೆ ಇವರದಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇನ್ನೂ ಕೆಲವರು ವಾದ್ಯಗಾರರಾಗಿ ಸಂಗೀತ ಸೇವೆಮಾಡುವ ಜವಾಬ್ದಾರಿಯಿತ್ತು. ಇವರು ಲೇವಿಯ ಗೋತ್ರಗಳಲ್ಲಿ ಪ್ರಧಾನರೂ ದೇವಾಲಯದ ಕೋಣೆಗಳಲ್ಲಿ ವಾಸಿಸುವವರೂ ಆಗಿದ್ದರು. ಅವರು ಹಗಲಿರುಳು ಕೆಲಸದಲ್ಲಿ ಇರುತ್ತಿದ್ದರಿಂದ ಇತರ ಸೇವೆಯಿಂದ ಬಿಡುಗಡೆ ಹೊಂದಿದ್ದರು.
Kannada BSI Bible 2016
ಇದಲ್ಲದೆ ಲೇವಿಯರ ಪಿತೃಗಳಲ್ಲಿ ಮುಖ್ಯಸ್ಥರಾದ ಇವರು ಹಾಡುಗಾರರಾಗಿದ್ದು ಸ್ವತಂತ್ರವಾಗಿ ಕೊಠಡಿ ಗಳಲ್ಲಿ ವಾಸವಾಗಿದ್ದರು; ಅವರು ರಾತ್ರಿ ಹಗಲು ಅದೇ ಕಾರ್ಯದಲ್ಲಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ವಾದ್ಯಗಾರರ ಪಟ್ಟಿ. ಅವರು ಲೇವಿಯ ಗೋತ್ರಗಳಲ್ಲಿ ಪ್ರಧಾನರೂ ದೇವಾಲಯದ ಕೋಣೆಗಳಲ್ಲಿ ವಾಸಿಸುವವರೂ ಆಗಿದ್ದರು. ಅವರು ಹಗಲಿರುಳೂ ಕೆಲಸದಲ್ಲಿರುತ್ತಿದ್ದದರಿಂದ ಇತರ ಸೇವೆಯಿಂದ ಬಿಡುಗಡೆ ಹೊಂದಿದ್ದರು.
Kannada Bible (KNCL) BSI 2016
ಇನ್ನು ಕೆಲವು ಲೇವಿಯ ಕುಟುಂಬಗಳ ಮೇಲೆ ದೇವಾಲಯದ ಸಂಗೀತದ ಹೊಣೆಯಿತ್ತು. ಈ ಕುಟುಂಬಗಳ ಮುಖ್ಯಸ್ಥರು ದೇವಾಲಯದ ಕಟ್ಟಡಗಳಲ್ಲಿ ವಾಸಿಸುತ್ತಾ, ಹಗಲಿರುಳೂ ಕೆಲಸ ಮಾಡಬೇಕಾಗಿದ್ದರಿಂದ ಬೇರೆ ಕೆಲಸಗಳ ಜವಾಬ್ದಾರಿ ಅವರಿಗಿರಲಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಲ್ಲದೆ ಲೇವಿಯರ ಕುಟುಂಬಗಳಲ್ಲಿ ಮುಖ್ಯಸ್ಥರಾದ ಇವರು ಹಾಡುಗಾರರಾಗಿದ್ದು, ಸ್ವತಂತ್ರವಾದ ಕೊಠಡಿಗಳಲ್ಲಿ ವಾಸವಾಗಿದ್ದರು. ಏಕೆಂದರೆ ಅವರು ರಾತ್ರಿ ಹಗಲು ಅದೇ ಕಾರ್ಯದಲ್ಲಿದ್ದರು.