1 Corinthians 1:12 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಂದರೆ, ನಿಮ್ಮಲ್ಲಿ ಒಬ್ಬನು, "ನಾನು ಪೌಲನನ್ನು ಹಿಂಬಾಲಿಸುತ್ತೇನೆ” ಎಂದು ಹೇಳುತ್ತಾನೆ; ಮತ್ತೊಬ್ಬನು, “ನಾನು ಅಪೊಲ್ಲೋಸನನ್ನು ಹಿಂಬಾಲಿಸುತ್ತೇನೆ” ಎಂದು ಹೇಳುತ್ತಾನೆ. ಇನ್ನೊಬ್ಬನು, "ನಾನು ಕೇಫನನ್ನು (ಪೇತ್ರನನ್ನು) ಹಿಂಬಾಲಿಸುತ್ತೇನೆ” ಎಂದು ಹೇಳುತ್ತಾನೆ. ಮತ್ತೊಬ್ಬನು, "ನಾನು ಕ್ರಿಸ್ತನನ್ನು ಹಿಂಬಾಲಿಸುತ್ತೇನೆ.” ಎಂದು ಹೇಳುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಾಗಿ ನಾನಿದನ್ನು ಹೇಳುತ್ತಿದ್ದೇನೆ, ನಿಮ್ಮೊಳಗೆ ಕೆಲವರು, “ನಾನು ಪೌಲನವನು,” ಇಲ್ಲವೆ, “ನಾನು ಅಪೊಲ್ಲೋಸನವನು,” ಅಥವಾ, “ನಾನು ಕೇಫನವನು,” ಇಲ್ಲವೆ, ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ.
Kannada BSI Bible 2016
ನಾನು ನಿಮಗೆ ಈಗ ಹೇಳುವದೇನಂದರೆ, ನಿಮ್ಮೊ ಳಗೆ ಪ್ರತಿಯೊಬ್ಬನು--ನಾನು ಪೌಲನವನು, ನಾನು ಅಪೊಲ್ಲೋಸನವನು, ನಾನು ಕೇಫನವನು, ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮೊಳಗೆ ಪ್ರತಿಯೊಬ್ಬನು - ನಾನು ಪೌಲನವನು, ಇಲ್ಲವೆ - ನಾನು ಅಪೊಲ್ಲೋಸನವನು, ಅಥವಾ - ನಾನು ಕೇಫನವನು, ಇಲ್ಲವೆ - ನಾನು ಕ್ರಿಸ್ತನವನು ಎಂದು ಹೇಳಿಕೊಳ್ಳುತ್ತಾನಂತೆ.
Kannada Bible (KNCL) BSI 2016
ನಿಮ್ಮ ಪೈಕಿ, ತಾನು ಪೌಲನ ಕಡೆಯವನು ಎಂದು ಒಬ್ಬ, ತಾನು ಅಪೊಲೋಸನ ಕಡೆಯವನು ಎಂದು ಇನ್ನೊಬ್ಬ, ತಾನು ಕೇಫನ ಕಡೆಯವನು ಎಂದು ಮತ್ತೊಬ್ಬ, ತಾನು ಕ್ರಿಸ್ತನ ಕಡೆಯವನು ಎಂದು ಮಗದೊಬ್ಬ. ಹೀಗೆ ಒಬ್ಬೊಬ್ಬರು ಒಂದೊಂದು ತೆರನಾಗಿ ಹೇಳಿಕೊಳ್ಳುತ್ತಾರಂತೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿಮ್ಮಲ್ಲಿ ಒಬ್ಬನು, “ನಾನು ಪೌಲನವನು,” ಇನ್ನೊಬ್ಬನು, “ನಾನು ಅಪೊಲ್ಲೋಸನವನು,” ಬೇರೊಬ್ಬನು, “ನಾನು ಕೇಫನವನು,” ಇನ್ನೊಬ್ಬನು, “ನಾನು ಕ್ರಿಸ್ತನವನು,” ಎಂದು ಹೇಳುತ್ತೀರಂತೆ.