1 Corinthians 1:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಮ್ಮಲ್ಲಿ ಕ್ರಿಸ್ಪನು ಮತ್ತು ಗಾಯನು ಇವರ ಹೊರತು ಬೇರೆ ಯಾರಿಗೂ ನಾನು ದೀಕ್ಷಾಸ್ನಾನ ಮಾಡಿಸಿಲ್ಲವಾದ್ದರಿಂದ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮ್ಮಲ್ಲಿ ಕ್ರಿಸ್ಪನಿಗೂ ಮತ್ತು ಗಾಯನಿಗೂ ಹೊರತಾಗಿ ಮತ್ತಾರಿಗೂ ನಾನು ದೀಕ್ಷಾಸ್ನಾನ ಮಾಡಿಸಲಿಲ್ಲ.
Kannada BSI Bible 2016
ನಿಮ್ಮಲ್ಲಿ ಕ್ರಿಸ್ಪನಿಗೂ ಗಾಯನಿಗೂ ಹೊರತಾಗಿ ಮತ್ತಾರಿಗೂ ನಾನು ಬಾಪ್ತಿಸ್ಮ ಮಾಡಿಸಲಿಲ್ಲವಾದದರಿಂದ ದೇವರಿಗೆ ಸ್ತೋತ್ರ ಸಲ್ಲಿಸುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿಮ್ಮಲ್ಲಿ ಕ್ರಿಸ್ಪನಿಗೂ ಗಾಯನಿಗೂ ಹೊರತಾಗಿ ಮತ್ತಾರಿಗೂ ನಾನು ದೀಕ್ಷಾಸ್ನಾನಮಾಡಿಸಲಿಲ್ಲವಾದದರಿಂದ ನೀವು ನನ್ನ ಹೆಸರಿನಲ್ಲಿ ದೀಕ್ಷಾಸ್ನಾನಮಾಡಿಸಿಕೊಂಡಿರೆಂದು ಯಾರೂ ಹೇಳಲಾಗದು. ಅದಕ್ಕಾಗಿ ದೇವರಿಗೆ ಸ್ತೋತ್ರ ಮಾಡುತ್ತೇನೆ.
Kannada Bible (KNCL) BSI 2016
ಸದ್ಯ! ಕ್ರಿಸ್ಪನು ಮತ್ತು ಗಾಯನು ಇವರಿಬ್ಬರನ್ನು ಬಿಟ್ಟರೆ ನಿಮ್ಮ ಪೈಕಿ ಯಾರಿಗೂ ನಾನು ದೀಕ್ಷಾಸ್ನಾನವನ್ನು ಕೊಟ್ಟಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕ್ರಿಸ್ಪನನ್ನು ಮತ್ತು ಗಾಯನನ್ನು ಹೊರತು ಬೇರೆ ಯಾರಿಗೂ ನಾನು ದೀಕ್ಷಾಸ್ನಾನ ಕೊಡಲಿಲ್ಲ. ಅದಕ್ಕಾಗಿ ನಾನು ದೇವರಿಗೆ ಸ್ತೋತ್ರ ಹೇಳುತ್ತೇನೆ.