1 Corinthians 1:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
(ಸ್ತೆಫನನ ಮನೆಯವರಿಗಲ್ಲದೆ ಬೇರೆ ಯಾರಿಗೂ ದೀಕ್ಷಾಸ್ನಾನ ಮಾಡಿಸಿದಂತೆ ನನಗೆ ತೋರುವುದಿಲ್ಲ.)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಸ್ತೆಫನನ ಮನೆಯವರಿಗೆ ಸಹ ದೀಕ್ಷಾಸ್ನಾನಮಾಡಿಸಿದ್ದೇನೆ ಇದನ್ನು ಹೊರತು ಇನ್ನಾರಿಗೂ ನಾನು ದೀಕ್ಷಾಸ್ನಾನಮಾಡಿಸಿದಂತೆ ತೋರುವುದಿಲ್ಲ.
Kannada BSI Bible 2016
ನಾನು ಸ್ತೆಫನನ ಮನೆಯವರಿಗೆ ಸಹ ಬಾಪ್ತಿಸ್ಮ ಮಾಡಿಸಿದೆನು. ಇವರಿಗಲ್ಲದೆ ಇನ್ನಾರಿಗೂ ನಾನು ಬಾಪ್ತಿಸ್ಮ ಮಾಡಿಸಿದಂತೆ ಕಾಣೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಸ್ತೆಫನನ ಮನೆಯವರಿಗೆ ಸಹ ದೀಕ್ಷಾಸ್ನಾನಮಾಡಿಸಿದೆನು. ಇವರಿಗಲ್ಲದೆ ಇನ್ನಾರಿಗೂ ನಾನು ದೀಕ್ಷಾಸ್ನಾನಮಾಡಿಸಿದಂತೆ ಕಾಣೆನು.
Kannada Bible (KNCL) BSI 2016
ಹೌದು, ಸ್ತೇಫನನ ಮನೆಯವರಿಗೂ ದೀಕ್ಷಾಸ್ನಾನವನ್ನು ಕೊಟ್ಟಿದ್ದೇನೆ. ಇವರಲ್ಲದೆ ಇನ್ನಾರಿಗೂ ದೀಕ್ಷಾಸ್ನಾನವನ್ನು ಕೊಟ್ಟ ನೆನಪು ನನಗಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೌದು, ಸ್ತೆಫನನ ಮನೆಯವರಿಗೂ ನಾನು ದೀಕ್ಷಾಸ್ನಾನ ಕೊಟ್ಟಿದ್ದೇನೆ. ಇದನ್ನು ಬಿಟ್ಟು ಯಾರಿಗೂ ನಾನು ದೀಕ್ಷಾಸ್ನಾನ ಕೊಟ್ಟಿದ್ದು ನನ್ನ ಜ್ಞಾಪಕದಲ್ಲಿಲ್ಲ.