1 Corinthians 1:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕ್ರಿಸ್ತನು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ, ಸುವಾರ್ತೆಯನ್ನು ತಿಳಿಸುವುದಕ್ಕಾಗಿಯಷ್ಟೆ. ಆದರೆ ವಾಕ್ಚಾತುರ್ಯದಿಂದ ಸಾರುವುದಕ್ಕಾಗಿ ಕಳುಹಿಸಲಿಲ್ಲ. ನಾನೇನಾದರೂ ಲೋಕಜ್ಞಾನದಿಂದ ಸುವಾರ್ತೆ ಸಾರಿದ್ದೇಯಾದರೆ, ಕ್ರಿಸ್ತನ ಶಿಲುಬೆಯೇ ನಿರರ್ಥಕವಾಗುವುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕ್ರಿಸ್ತನು ನನ್ನನ್ನು ಕಳುಹಿಸಿದ್ದು ದೀಕ್ಷಾಸ್ನಾನಮಾಡಿಸುವುದಕ್ಕಲ್ಲ ಆದರೆ ಸುವಾರ್ತೆಯನ್ನು ಸಾರುವುದಕ್ಕಾಗಿಯೇ. ಅದನ್ನು ಮನುಷ್ಯಜ್ಞಾನದ ಮಾತುಗಳಿಂದ ಸಾರಬೇಕೆಂದು ಕಳುಹಿಸಲಿಲ್ಲ; ಹಾಗೆ ಸಾರಿದರೆ ಕ್ರಿಸ್ತನ ಶಿಲುಬೆಯ ಶಕ್ತಿಯು ಮಾತಿನ ಚತುರತೆಯಿಂದ ನಿರರ್ಥಕವಾಗಿ ಹೋಗುತ್ತದೆ.
Kannada BSI Bible 2016
ಬಾಪ್ತಿಸ್ಮ ಮಾಡಿಸುವದಕ್ಕಲ್ಲ, ಸುವಾರ್ತೆಯನ್ನು ಸಾರುವದಕ್ಕೆ ಕ್ರಿಸ್ತನು ನನ್ನನ್ನು ಕಳುಹಿಸಿದನು. ವಾಕ್ಚಾತುರ್ಯದಿಂದ ಸಾರಬೇಕೆಂದು ಕಳುಹಿಸಲಿಲ್ಲ; ಹಾಗೆ ಸಾರಿದರೆ ಕ್ರಿಸ್ತನ ಶಿಲುಬೆಯು ನಿರರ್ಥಕವಾಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೀಕ್ಷಾಸ್ನಾನ ಮಾಡಿಸುವದಕ್ಕಲ್ಲ, ಸುವಾರ್ತೆಯನ್ನು ಸಾರುವದಕ್ಕೇ ಕ್ರಿಸ್ತನು ನನ್ನನ್ನು ಕಳುಹಿಸಿದನು. ಆದರೆ ವಾಕ್ಚಾತುರ್ಯದಿಂದ ಸಾರಬೇಕೆಂದು ಕಳುಹಿಸಲಿಲ್ಲ; ಹಾಗೆ ಸಾರಿದರೆ ಕ್ರಿಸ್ತನ ಶಿಲುಬೆಯು ನಿರರ್ಥಕವಾಗುವದು.
Kannada Bible (KNCL) BSI 2016
ಯೇಸುಕ್ರಿಸ್ತರು ನನ್ನನ್ನು ಕಳುಹಿಸಿರುವುದು ದೀಕ್ಷಾಸ್ನಾನವನ್ನು ಕೊಡುವುದಕ್ಕಲ್ಲ. ಶುಭಸಂದೇಶವನ್ನು ಸಾರುವುದಕ್ಕೆ ಅದೂ ವಾಕ್‍ಚಾತುರ್ಯದಿಂದಲ್ಲ. ಹಾಗೆ ಸಾರಿದ್ದೇ ಆದರೆ, ಕ್ರಿಸ್ತಯೇಸುವಿನ ಶಿಲುಬೆಯೇ ನಿರರ್ಥಕವಾದೀತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೀಕ್ಷಾಸ್ನಾನ ಕೊಡುವುದಕ್ಕಾಗಿ ಕ್ರಿಸ್ತ ಯೇಸು ನನ್ನನ್ನು ಕಳುಹಿಸದೆ ಸುವಾರ್ತೆಯನ್ನು ಸಾರುವುದಕ್ಕಾಗಿ ನನ್ನನ್ನು ಕಳುಹಿಸಿದ್ದಾರೆ. ಸುವಾರ್ತೆ ಸಾರುವಂಥದ್ದು ವಾಕ್ಚಾತುರ್ಯದಿಂದಲ್ಲ. ಹಾಗೆ ಸಾರುತ್ತಿದ್ದರೆ ಕ್ರಿಸ್ತ ಯೇಸುವಿನ ಶಿಲುಬೆಯ ಶಕ್ತಿಯು ಬರಿದಾಗಿಬಿಡುತಿತ್ತು.