1 Corinthians 1:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಕ್ರಿಸ್ತ ಯೇಸುವಿನಲ್ಲಿ ಪವಿತ್ರರಾಗಿ ಮಾಡಲ್ಪಟ್ಟಿರುವ ಕೊರಿಂಥದ ದೇವರ ಸಭೆಯವರಿಗೆ ಈ ಪತ್ರವನ್ನು ಬರೆಯುತ್ತಿದ್ದೇನೆ. ನೀವು ದೇವರ ಪವಿತ್ರ ಜನರಾಗುವುದಕ್ಕೆ ಕರೆಯಲ್ಪಟ್ಟಿದ್ದೀರಿ. ಪ್ರಭುವಾದ ಯೇಸು ಕ್ರಿಸ್ತನ ಹೆಸರಿನಲ್ಲಿ ನಂಬಿಕೆ ಇಡುವ ಎಲ್ಲಾ ಜನರೊಂದಿಗೆ ನೀವು ಕರೆಯಲ್ಪಟ್ಟಿದ್ದೀರಿ. ಯೇಸು ಕ್ರಿಸ್ತನು ಅವರಿಗೂ ನಮಗೂ ಪ್ರಭುವಾಗಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತ ಯೇಸುವಿನಲ್ಲಿ ಪ್ರತಿಷ್ಠಿತರಾದವರಿಗೂ, ಪರಿಶುದ್ಧರಾಗಿರಲು ಕರೆಯಲ್ಪಟ್ಟವರಿಗೂ, ನಮ್ಮ ಮತ್ತು ಅವರ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರೆಲ್ಲಿದ್ದರೂ ಅವರೆಲ್ಲರಿಗೂ ಬರೆಯುವುದು ಏನೆಂದರೆ,
Kannada BSI Bible 2016
ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತ ಯೇಸುವಿನಲ್ಲಿ ಪ್ರತಿಷ್ಠಿತರೂ ಪರಿಶುದ್ಧರಾಗು ವದಕ್ಕೆ ಕರೆಯಲ್ಪಟ್ಟವರೂ ಆಗಿರುವವರಿಗೆ ಮತ್ತು ಅವರಿಗೂ ನಮಗೂ ಪ್ರತಿಯೊಂದು ಸ್ಥಳದಲ್ಲಿ ನಮ್ಮ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರೆಲ್ಲರಿಗೂ
Kannada BSI JV (ಕನ್ನಡ ಸತ್ಯವೇದವು J.V. (BSI))
ಸೊಸ್ಥೆನನೂ ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತೇಸುವಿನಲ್ಲಿ ಪ್ರತಿಷ್ಠಿತರೂ ದೇವಜನರಾಗುವದಕ್ಕೆ ಕರೆಯಲ್ಪಟ್ಟವರೂ ಆಗಿರುವವರಿಗೆ ಮತ್ತು ನಮಗೂ ಸಮಸ್ತ ದೇವಜನರಿಗೂ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರು ಎಲ್ಲಿದ್ದರೂ
Kannada Bible (KNCL) BSI 2016
ಯೇಸುಕ್ರಿಸ್ತರು ನಮಗೂ ಸಮಸ್ತ ದೇವಜನರಿಗೂ ಪ್ರಭುವಾಗಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕ್ರಿಸ್ತ ಯೇಸುವಿನಲ್ಲಿ ಪ್ರತ್ಯೇಕವಾಗಿ, ಪವಿತ್ರರಾಗುವುದಕ್ಕೆ ಕರೆಹೊಂದಿದ ಕೊರಿಂಥದಲ್ಲಿರುವ ದೇವರ ಸಭೆಗೆ ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ನಾಮದಲ್ಲಿ ವಿಶ್ವಾಸವಿಟ್ಟ ಸಕಲ ಜನರಿಗೂ ಬರೆಯುವ ಪತ್ರ: