1 Corinthians 1:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜ್ಞಾನಿಯು ಎಲ್ಲಿದ್ದಾನೆ? ವಿದ್ಯಾವಂತನು ಎಲ್ಲಿದ್ದಾನೆ? ಈ ಕಾಲದ ತತ್ವಜ್ಞಾನಿಯು ಎಲ್ಲಿದ್ದಾನೆ? ದೇವರು ಲೋಕದ ಜ್ಞಾನವನ್ನು ಮೂರ್ಖತನವನ್ನಾಗಿ ಮಾಡಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಜ್ಞಾನಿಯು ಎಲ್ಲಿ? ವಿದ್ವಾಂಸನು ಎಲ್ಲಿ? ಇಹಲೋಕದ ತರ್ಕವಾದಿ ಎಲ್ಲಿ? ದೇವರು ಇಹಲೋಕದ ಜ್ಞಾನವನ್ನು ಮೂರ್ಖತನವಾಗಿ ಮಾಡಿದ್ದಾನಲ್ಲವೇ?
Kannada BSI Bible 2016
ಜ್ಞಾನಿಯು ಎಲ್ಲಿ? ಶಾಸ್ತ್ರಿಯು ಎಲ್ಲಿ? ಲೋಕದ ತರ್ಕವಾದಿ ಎಲ್ಲಿ? ದೇವರು ಈ ಲೋಕದ ಜ್ಞಾನವನ್ನು ಹುಚ್ಚುತನವನ್ನಾಗಿ ಮಾಡಿದ್ದಾನಲ್ಲವೇ?
Kannada BSI JV (ಕನ್ನಡ ಸತ್ಯವೇದವು J.V. (BSI))
ಜ್ಞಾನಿಯು ಎಲ್ಲಿ? ಶಾಸ್ತ್ರಿಯೆಲ್ಲಿ? ಇಹಲೋಕದ ತರ್ಕವಾದಿ ಎಲ್ಲಿ? ದೇವರು ಇಹಲೋಕಜ್ಞಾನವನ್ನು ಹುಚ್ಚುತನವಾಗ ಮಾಡಿದ್ದಾನಲ್ಲವೇ.
Kannada Bible (KNCL) BSI 2016
ಹೀಗಿರುವಾಗ ಜ್ಞಾನಿಯೆಲ್ಲಿ? ಶಾಸ್ತ್ರಜ್ಞನೆಲ್ಲಿ? ಜಗತ್ತಿನ ತರ್ಕನಿಪುಣನೆಲ್ಲಿ? ಪ್ರಪಂಚದ ಜ್ಞಾನವನ್ನು ದೇವರು ಹುಚ್ಚುತನವಾಗಿಸಿಲ್ಲವೇ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಜ್ಞಾನಿಯಾದ ಮನುಷ್ಯನೆಲ್ಲಿ? ಪಂಡಿತನು ಎಲ್ಲಿ? ಈ ಕಾಲದ ತತ್ವಜ್ಞಾನಿ ಎಲ್ಲಿ? ಈ ಲೋಕದ ಜ್ಞಾನವನ್ನು ದೇವರು ಬುದ್ದಿಹೀನತೆಯನ್ನಾಗಿ ಮಾಡಿದ್ದಾರಲ್ಲವೇ?