1 Corinthians 1:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದು ದೇವರ ಜ್ಞಾನದ ಸಂಕಲ್ಪವಾಗಿತ್ತು. ಲೋಕವು ತನ್ನ ಸ್ವಂತ ಜ್ಞಾನದ ಮೂಲಕವಾಗಿ ದೇವರನ್ನು ತಿಳಿದುಕೊಂಡಿರಲಿಲ್ಲ. ಆದ್ದರಿಂದ ಮೂರ್ಖತನದಂತೆ ತೋರುವ ಸಂದೇಶದ ಮೂಲಕ ನಂಬುವವರನ್ನು ರಕ್ಷಿಸುವುದು ದೇವರಿಗೆ ಒಳ್ಳೆಯದೆನಿಸಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಲೋಕವು ತನ್ನ ಜ್ಞಾನದಿಂದ ದೇವರನ್ನು ತಿಳಿದುಕೊಳ್ಳದೆ ಹೋದದ್ದರಿಂದ; ಮೂರ್ಖತನವೆನಿಸಿಕೊಂಡಿರುವ ನಮ್ಮ ಬೋಧನೆಯ ಮೂಲಕ ನಂಬುವವರನ್ನು ರಕ್ಷಿಸುವುದು ದೇವರಿಗೆ ಹಿತವೆಂದು ತೋರಿತು.
Kannada BSI Bible 2016
ಯಾಕಂದರೆ ದೇವರ ಜ್ಞಾನದಲ್ಲಿ ಲೋಕವು(ತನ್ನ) ಜ್ಞಾನದ ಮೂಲಕ ದೇವರನ್ನು ತಿಳಿದುಕೊಳ್ಳಲಿಲ್ಲವಾದ ದರಿಂದ ಪ್ರಸಂಗದ ಹುಚ್ಚುತನದಿಂದಲೇ ನಂಬುವ ವರನ್ನು ರಕ್ಷಿಸುವದು ದೇವರಿಗೆ ಇಷ್ಟವಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೇಗಂದರೆ ಲೋಕವು ಜ್ಞಾನವೆನಿಸುವ ಮಾರ್ಗದಿಂದ ದೇವರನ್ನು ತಿಳುಕೊಳ್ಳದೆ ಹೋದದ್ದು ದೇವರ ಜ್ಞಾನದ ಸಂಕಲ್ಪವೆ; ಹೀಗಾದ ಮೇಲೆ ಹುಚ್ಚು ಮಾತು ಎಣಿಸಿಕೊಂಡಿರುವ ನಮ್ಮ ಪ್ರಸಂಗದಿಂದಲೇ ನಂಬುವವರನ್ನು ರಕ್ಷಿಸುವದು ದೇವರಿಗೆ ಒಳ್ಳೇದೆಂದು ತೋಚಿತು.
Kannada Bible (KNCL) BSI 2016
ಲೋಕವು ತನ್ನ ಸ್ವಂತ ಜ್ಞಾನದಿಂದ ದೇವರನ್ನು ಅರಿಯಲಾರದೆ ಹೋಯಿತು. ಇದು ದೈವಸಂಕಲ್ಪವೇ ಸರಿ. ಆದ್ದರಿಂದಲೇ ನಾವು ಸಾರುವ ‘ಹುಚ್ಚುತನ’ವೆಂಬ ಸಂದೇಶದ ಮೂಲಕ ವಿಶ್ವಾಸವುಳ್ಳವರನ್ನು ಉದ್ಧರಿಸುವುದು ದೇವರಿಗೆ ಉಚಿತವೆನಿಸಿತು
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಪ್ರಪಂಚವು ತನ್ನ ಜ್ಞಾನದ ಮೂಲಕ ದೇವರನ್ನು ಅರಿತುಕೊಳ್ಳಲಿಲ್ಲ; ಆದ್ದರಿಂದ ದೇವರ ಜ್ಞಾನದಿಂದ, ನಂಬಿದವರನ್ನು ಪ್ರಸಂಗದ ಬುದ್ದಿಹೀನತೆಯಿಂದ ರಕ್ಷಿಸುವುದು ದೇವರಿಗೆ ಮೆಚ್ಚುಗೆಯಾಯಿತು.