1 Corinthians 1:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾವಾದರೋ, ಶಿಲುಬೆಗೇರಿಸಲ್ಪಟ್ಟ ಕ್ರಿಸ್ತನ ಕುರಿತಾಗಿ ಬೋಧಿಸುತ್ತೇವೆ. ಇದು ಯೆಹೂದ್ಯರಿಗೆ ದೊಡ್ಡ ಸಮಸ್ಯೆಯಾಗಿದೆ; ಯೆಹೂದ್ಯರಲ್ಲದ ಜನರಿಗೆ ಮೂರ್ಖತನದಂತೆ ತೋರುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವಾದರೋ ಶಿಲುಬೆಗೆ ಹಾಕಲ್ಪಟ್ಟ ಕ್ರಿಸ್ತನನ್ನು ಸಾರುತ್ತೇವೆ; ಕ್ರಿಸ್ತನ ಸಂದೇಶವು ಯೆಹೂದ್ಯರಿಗೆ ವಿಘ್ನವೂ ಮತ್ತು ಗ್ರೀಕರಿಗೆ ಮೂರ್ಖತನವೂ ಆಗಿದೆ.
Kannada BSI Bible 2016
ನಾವಾದರೋ ಶಿಲುಬೆಗೆ ಹಾಕಲ್ಪಟ್ಟವನಾದ ಕ್ರಿಸ್ತನನ್ನು ಪ್ರಚುರ ಪಡಿಸುತ್ತೇವೆ. ಆತನು ಯೆಹೂದ್ಯರಿಗೆ ಅಭ್ಯಂತರವೂ ಗ್ರೀಕರಿಗೆ ಹುಚ್ಚುತನವೂ ಆಗಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವಾದರೋ ಶಿಲುಬೆಗೆ ಹಾಕಲ್ಪಟ್ಟವನಾದ ಕ್ರಿಸ್ತನನ್ನು ಪ್ರಚುರಪಡಿಸುತ್ತೇವೆ. ಇಂಥ ಕ್ರಿಸ್ತನ ಸಂಗತಿಯು ಯೆಹೂದ್ಯರಿಗೆ ವಿಘ್ನವೂ ಅನ್ಯಜನರಿಗೆ ಹುಚ್ಚುಮಾತೂ ಆಗಿದೆ;
Kannada Bible (KNCL) BSI 2016
ನಾವಾದರೋ ಶಿಲುಬೆಗೇರಿಸಲಾದ ಕ್ರಿಸ್ತಯೇಸುವನ್ನು ಪ್ರಚುರಪಡಿಸುತ್ತೇವೆ. ಯೆಹೂದ್ಯರಿಗೆ ಇದು ಅಸಹ್ಯವಾಗಿದೆ; ಅನ್ಯಜನರಿಗೆ ಹಾಸ್ಯಾಸ್ಪದವಾಗಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾವಾದರೋ ಶಿಲುಬೆಗೆ ಹಾಕಲಾದ ಕ್ರಿಸ್ತ ಯೇಸುವನ್ನೇ ಪ್ರಸಂಗಿಸುತ್ತಿದ್ದೇವೆ. ಇದು ಯೆಹೂದ್ಯರಿಗೆ ವಿಘ್ನವೂ ಯೆಹೂದ್ಯರಲ್ಲದವರಿಗೆ ಬುದ್ದಿಹೀನತೆಯಾಗಿದೆ.