1 Corinthians 1:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರಿಂದ ಕರೆಯಲ್ಪಟ್ಟಿರುವ ಜನರು ಯೆಹೂದ್ಯರಾಗಿದ್ದರೂ ಯೆಹೂದ್ಯರಲ್ಲದವರಾಗಿದ್ದರೂ ಅವರಿಗೆ ಕ್ರಿಸ್ತನು ದೇವರ ಶಕ್ತಿಯಾಗಿದ್ದಾನೆ; ಮತ್ತು ದೇವರ ಜ್ಞಾನವಾಗಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ದೇವರಿಂದ ಕರಿಸಿಕೊಂಡವರಾದ ಯೆಹೂದ್ಯರಿಗಾಗಲಿ, ಗ್ರೀಕರಿಗಾಗಲಿ ಕ್ರಿಸ್ತನೇ ದೇವರ ಶಕ್ತಿಯೂ ಮತ್ತು ದೇವರ ಜ್ಞಾನವೂ ಆಗಿರುವಾತನೆಂದು ನಾವು ಸಾರುತ್ತೇವೆ.
Kannada BSI Bible 2016
ಆದರೆ ಕರೆಯಲ್ಪಟ್ಟ ಯೆಹೂದ್ಯರಿಗೂ ಗ್ರೀಕರಿಗೂ ಕ್ರಿಸ್ತನೇ ದೇವರ ಶಕ್ತಿಯೂ ದೇವರ ಜ್ಞಾನವೂ ಆಗಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ದೇವರಿಂದ ಕರಿಸಿಕೊಂಡವರು ಯೆಹೂದ್ಯರಾಗಲಿ ಗ್ರೀಕರಾಗಲಿ ಅವರಿಗೆ ಇಂಥವನು ದೇವರ ಶಕ್ತಿಯೂ ದೇವರ ಜ್ಞಾನವೂ ಆಗಿರುವ ಕ್ರಿಸ್ತನೇ.
Kannada Bible (KNCL) BSI 2016
ಆದರೆ ಯೆಹೂದ್ಯರಾಗಿರಲಿ, ಗ್ರೀಕರಾಗಿರಲಿ, ದೇವರಿಂದ ಕರೆಹೊಂದಿದ್ದರೆ ಅಂಥವರಿಗೆ ಯೇಸುಕ್ರಿಸ್ತರು ದೇವರ ಶಕ್ತಿಯಾಗಿದ್ದಾರೆ ಹಾಗೂ ದೇವರ ಜ್ಞಾನವಾಗಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ದೇವರಿಂದ ರಕ್ಷಣೆಗೆ ಕರೆಹೊಂದಿದ ಯೆಹೂದ್ಯರಿಗಾಗಲಿ, ಯೆಹೂದ್ಯರಲ್ಲದವರಿಗಾಗಲಿ ಕ್ರಿಸ್ತ ಯೇಸು ದೇವರ ಶಕ್ತಿಯೂ ದೇವರ ಜ್ಞಾನವೂ ಆಗಿದ್ದಾರೆ.