1 Corinthians 1:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರ ಮೂಢತನವು ಸಹ ಮನುಷ್ಯರ ಜ್ಞಾನಕ್ಕಿಂತಲೂ ಶ್ರೇಷ್ಠವಾಗಿದೆ. ದೇವರ ಬಲಹೀನತೆಯು ಸಹ ಮನುಷ್ಯರ ಬಲಕ್ಕಿಂತಲೂ ಹೆಚ್ಚು ಶಕ್ತಿಯುತವಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರ ಬುದ್ಧಿಹೀನತೆಯು ಮನುಷ್ಯರ ಜ್ಞಾನಕ್ಕಿಂತಲೂ ಶ್ರೇಷ್ಠವಾದದ್ದು, ದೇವರ ಬಲಹೀನತೆಯು ಮನುಷ್ಯರ ಬಲಕ್ಕಿಂತಲೂ ಶಕ್ತಿಯುಳ್ಳದ್ದಾಗಿದೆ.
Kannada BSI Bible 2016
ದೇವರ ಹುಚ್ಚುತನವು ಮನುಷ್ಯರಿಗಿಂತಲೂ ಜ್ಞಾನವುಳ್ಳದ್ದಾಗಿದೆ. ದೇವರ ಬಲಹೀನತೆಯು ಮನುಷ್ಯರಿಗಿಂತಲೂ ಬಲವುಳ್ಳದ್ದಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಲೋಕದವರು ದೇವರಲ್ಲಿ ಯಾವದನ್ನು ಬುದ್ಧಿಹೀನತೆಯೆಂದು ಎಣಿಸುತ್ತಾರೋ ಅದು ಮನುಷ್ಯರ ಜ್ಞಾನಕ್ಕಿಂತಲೂ ಶ್ರೇಷ್ಠ ಜ್ಞಾನವಾಗಿದೆ. ಅವರು ದೇವರಲ್ಲಿ ಯಾವದನ್ನು ಬಲಹೀನತೆಯೆಂದು ಎಣಿಸುತ್ತಾರೋ ಅದು ಮನುಷ್ಯರ ಬಲಕ್ಕಿಂತಲೂ ಬಲವುಳ್ಳದ್ದಾಗಿದೆ.
Kannada Bible (KNCL) BSI 2016
‘ದೇವರ ಹುಚ್ಚುತನ’ ಎಂಬುದು ಮಾನವ ಜ್ಞಾನಕ್ಕಿಂತಲೂ ಶ್ರೇಷ್ಠವಾದುದು. ‘ದೇವರ ದೌರ್ಬಲ್ಯ’ ಎಂಬುದು ಮಾನವ ಶಕ್ತಿಗಿಂತಲೂ ಪ್ರಬಲವಾದುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ದೇವರ ಬುದ್ಧಿಹೀನತೆ ಮನುಷ್ಯರ ಜ್ಞಾನಕ್ಕಿಂತಲೂ ಶ್ರೇಷ್ಠವಾಗಿದೆ. ದೇವರ ಬಲಹೀನತೆ ಮನುಷ್ಯರ ಬಲಕ್ಕಿಂತಲೂ ಬಲವುಳ್ಳದ್ದಾಗಿದೆ.