1 Corinthians 1:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಹೋದರ ಸಹೋದರಿಯರೇ, ದೇವರು ನಿಮ್ಮನ್ನು ಕರೆದಾಗ ನೀವು ಹೇಗಿದ್ದಿರಿ ಎಂದು ಜ್ಞಾಪಿಸಿಕೊಳ್ಳಿರಿ. ಲೋಕದ ಎಣಿಕೆಯಲ್ಲಿ ನಿಮ್ಮಲ್ಲಿ ಅನೇಕರು ಜ್ಞಾನಿಗಳಾಗಿರಲಿಲ್ಲ; ಅಧಿಕಾರಿಗಳಾಗಿರಲಿಲ್ಲ; ಪ್ರಾಮುಖ್ಯವಾದ ಕುಟುಂಬಗಳಿಗೆ ಸೇರಿದವರಾಗಿರಲಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಹೋದರರೇ, ದೇವರು ನಿಮ್ಮನ್ನು ಕರೆದಾಗ ನೀವು ಹೇಗಿದ್ದೀರೆಂದು ಆಲೋಚಿಸಿರಿ. ಮನುಷ್ಯರ ದೃಷ್ಟಿಯಲ್ಲಿ ನಿಮ್ಮೊಳಗೆ ಜ್ಞಾನಿಗಳೂ ಹೆಚ್ಚಿನ ಸಂಖ್ಯೆಯಲ್ಲಿಲ್ಲ, ಪ್ರಬಲರೂ ಅನೇಕರಿರಲಿಲ್ಲ, ಕುಲೀನರೂ ಅನೇಕರಿರಲಿಲ್ಲ.
Kannada BSI Bible 2016
ಸಹೋದರರೇ, ದೇವರು ನಿಮ್ಮನ್ನು ಕರೆದಾಗ ಎಂಥವರನ್ನು ಕರೆದನೆಂದು ಆಲೋಚಿಸಿರಿ; ನಿಮ್ಮೊಳಗೆ ಲೌಕಿಕದೃಷ್ಟಿಯಲ್ಲಿ ಜ್ಞಾನಿಗಳೂ ಅನೇಕರಿಲ್ಲ, ಬಲಿಷ್ಠರೂ ಅನೇಕರಿಲ್ಲ, ಕುಲೀನರೂ ಅನೇಕರಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಹೋದರರೇ, ದೇವರು ನಿಮ್ಮನ್ನು ಕರೆದಾಗ ಎಂಥವರನ್ನು ಕರೆದನೆಂದು ಆಲೋಚಿಸಿರಿ. ನಿಮ್ಮೊಳಗೆ ಲೌಕಿಕ ದೃಷ್ಟಿಯಲ್ಲಿ ಜ್ಞಾನಿಗಳೂ ಅನೇಕರಿಲ್ಲ, ಅಧಿಕಾರಿಗಳೂ ಅನೇಕರಿಲ್ಲ, ಕುಲೀನರೂ ಅನೇಕರಿಲ್ಲ.
Kannada Bible (KNCL) BSI 2016
ಸಹೋದರರೇ, ನಿಮ್ಮನ್ನು ದೇವರು ಕರೆದಾಗ ನೀವು ಹೇಗಿದ್ದಿರಿ ಎಂದು ಜ್ಞಾಪಿಸಿಕೊಳ್ಳಿ. ಲೋಕದ ಎಣಿಕೆಯಲ್ಲಿ ನಿಮ್ಮೊಳಗೆ ಜ್ಞಾನಿಗಳು ಅನೇಕರಿಲ್ಲ. ಪರಾಕ್ರಮಿಗಳು ಅನೇಕರಿಲ್ಲ, ಕುಲೀನರು ಅನೇಕರಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರಿಯರೇ, ನೀವು ದೇವರ ಕರೆಯನ್ನು ಹೊಂದಿದಾಗ ಏನಾಗಿದ್ದಿರೆಂಬುದನ್ನು ಆಲೋಚಿಸಿರಿ. ನಿಮ್ಮೊಳಗೆ ಲೋಕಾನುಸಾರವಾಗಿ ಜ್ಞಾನಿಗಳೂ ಅನೇಕರಿಲ್ಲ, ಪ್ರಭಾವಿಗಳೂ ಅನೇಕರಿಲ್ಲ, ಕುಲೀನರೂ ಅನೇಕರಿಲ್ಲ.