1 Corinthians 1:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ದೇವರು ಈ ಲೋಕದ ಜ್ಞಾನಿಗಳನ್ನು ನಾಚಿಕೆಪಡಿಸುವುದಕ್ಕಾಗಿ ಮೂಢರನ್ನು ಆರಿಸಿಕೊಂಡಿದ್ದಾನೆ; ಬಲಿಷ್ಠರನ್ನು ನಾಚಿಕೆಪಡಿಸುವುದಕ್ಕಾಗಿ ಬಲಹೀನರನ್ನು ಆರಿಸಿಕೊಂಡಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡನು; ದೇವರು ಬಲಿಷ್ಠರನ್ನು ನಾಚಿಕೆಪಡಿಸುವುದಕ್ಕಾಗಿ ಈ ಲೋಕದ ಅಶಕ್ತರನ್ನು, ಬಲಹೀನರನ್ನು ಆರಿಸಿಕೊಂಡನು.
Kannada BSI Bible 2016
ಆದರೆ ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾನೆ; ದೇವರು ಬಲಿಷ್ಟರನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾನೆ;
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾನೆ; ದೇವರು ಬಲಿಷ್ಠರನ್ನು ನಾಚಿಕೆಪಡಿಸುವದಕ್ಕಾಗಿ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾನೆ;
Kannada Bible (KNCL) BSI 2016
ಜ್ಞಾನಿಗಳನ್ನು ನಾಚಿಕೆಗೀಡುಮಾಡಲು ದೇವರು ಲೋಕದ ದೃಷ್ಟಿಯಲ್ಲಿ ಮೂರ್ಖರನ್ನು ಆರಿಸಿಕೊಂಡರು; ಅಂತೆಯೇ ಬಲಿಷ್ಠರನ್ನು ಲಜ್ಜೆಗೀಡುಮಾಡಲು ಲೋಕದ ದೃಷ್ಟಿಯಲ್ಲಿ ಬಲಹೀನರನ್ನು ಆರಿಸಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ಜ್ಞಾನಿಗಳನ್ನು ನಾಚಿಕೆಪಡಿಸುವಂತೆ, ಈ ಲೋಕದ ಬುದ್ಧಿಹೀನರನ್ನು ಆರಿಸಿಕೊಂಡಿದ್ದಾರೆ. ದೇವರು ಬಲಿಷ್ಠರನ್ನು ನಾಚಿಕೆಪಡಿಸುವಂತೆ ಈ ಲೋಕದ ಬಲಹೀನರನ್ನು ಆರಿಸಿಕೊಂಡಿದ್ದಾರೆ.