1 Corinthians 1:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಲೋಕವು ಯಾವುದನ್ನು ಮುಖ್ಯವಲ್ಲವೆಂದು ಯೋಚಿಸುತ್ತದೆಯೋ ಯಾವುದನ್ನು ದ್ವೇಷಿಸುತ್ತದೆಯೋ ಮತ್ತು ನಿಷ್ಪ್ರಯೋಜಕವೆಂದು ಪರಿಗಣಿಸುತ್ತದೆಯೋ ಅದನ್ನು ದೇವರು ಆರಿಸಿಕೊಂಡನು. ಲೋಕವು ಯಾವುದನ್ನು ಮುಖ್ಯವೆಂದು ಯೋಚಿಸುತ್ತದೊ ಅದನ್ನು ನಾಶಪಡಿಸಲು ದೇವರು ಹೀಗೆ ಮಾಡಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರು ಈ ಲೋಕದಲ್ಲಿ ಕೀಳಾದವರನ್ನೂ ಹಾಗೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣ್ಯರನ್ನು ಇಲ್ಲದಂತೆ ಮಾಡುವುದಕ್ಕಾಗಿ ಗಣನೆಗೆ ಬಾರದವರನ್ನು, ನಿಂದಿಸಲ್ಪಟ್ಟವರನ್ನು ಆರಿಸಿಕೊಂಡಿದ್ದಾನೆ.
Kannada BSI Bible 2016
ಇದಲ್ಲದೆ ದೇವರು ಇರುವವುಗಳನ್ನು ಇಲ್ಲದಂತಾಗಿ ಮಾಡುವ ಹಾಗೆ ಈ ಲೋಕದ ಹೀನವಾದವರನ್ನೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣನೆಗೆ ಬಾರದವರನ್ನೂ ಆರಿಸಿಕೊಂಡಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರು ಈ ಲೋಕದ ಕುಲಹೀನರನ್ನೂ ಅಸಡ್ಡೆಯಾದವರನ್ನೂ ಆರಿಸಿಕೊಂಡದ್ದಲ್ಲದೆ ಗಣ್ಯರನ್ನು ಇಲ್ಲದಂತೆ ಮಾಡುವದಕ್ಕಾಗಿ ಗಣನೆಗೆ ಬಾರದವರನ್ನು ಆರಿಸಿಕೊಂಡಿದ್ದಾನೆ. ಹೀಗಿರಲು ದೇವರ ಮುಂದೆ ಹೊಗಳಿಕೊಳ್ಳುವದಕ್ಕೆ ಯಾರಿಗೂ ಆಸ್ಪದವಿಲ್ಲ.
Kannada Bible (KNCL) BSI 2016
ಲೋಕದ ದೃಷ್ಟಿಯಲ್ಲಿ ಗಣ್ಯವಾದುದನ್ನು ನಿರ್ನಾಮಗೊಳಿಸಲು ಗಣನೆಗೆ ಬಾರದುದನ್ನು, ಕೀಳಾದುದನ್ನು, ಬೀಳಾದುದನ್ನು ಆರಿಸಿಕೊಂಡರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ಈ ಲೋಕದ ಗಣ್ಯರನ್ನು ಏನೂ ಇಲ್ಲದವರನ್ನಾಗಿ ಮಾಡುವುದಕ್ಕಾಗಿ ಗಣನೆಗೆ ಬಾರದವರನ್ನೂ, ಹೀನೈಸಲಾದವರನ್ನೂ ಕೀಳಾದವರನ್ನೂ, ಆರಿಸಿಕೊಂಡಿದ್ದಾರೆ.