1 Corinthians 1:30 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಮ್ಮನ್ನು ಕ್ರಿಸ್ತ ಯೇಸುವಿನಲ್ಲಿ ಒಂದು ಭಾಗವನ್ನಾಗಿ ಮಾಡಿದಾತನು ದೇವರೇ. ಕ್ರಿಸ್ತನು ನಮಗಾಗಿ ದೇವರಿಂದ ಬಂದ ಜ್ಞಾನವಾಗಿದ್ದಾನೆ. ನಾವು ನೀತಿವಂತರಾಗಿರುವುದಕ್ಕೆ, ಪಾಪದಿಂದ ಬಿಡುಗಡೆಯಾಗಿರುವುದಕ್ಕೆ ಮತ್ತು ಪವಿತ್ರರಾಗಿರುವುದಕ್ಕೆ ಕ್ರಿಸ್ತನೇ ಕಾರಣನಾಗಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರು ಈ ರೀತಿ ಮಾಡಿದ್ದರಿಂದಲೇ ಈಗ ನೀವು ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ದೇವರ ಕಡೆಯಿಂದ ನಮಗೆ ಜ್ಞಾನವೂ, ನೀತಿಯೂ, ಶುದ್ಧಿಯೂ, ಮತ್ತು ವಿಮೋಚನೆಯು ಆಗಿದ್ದಾನೆ.
Kannada BSI Bible 2016
ಆದರೆ ನೀವು ಕ್ರಿಸ್ತ ಯೇಸುವಿನಲ್ಲಿ ರುವದು ಆತನಿಂದಲೇ; ಆತನು ನಮಗೆ ದೇವರ ಕಡೆಯಿಂದ ಜ್ಞಾನವು ನೀತಿ ಶುದ್ಧೀಕರಣ ವಿಮೋಚನೆ ಗಳಾಗಿ ಮಾಡಲ್ಪಟ್ಟಿದ್ದಾನೆ.ಹೆಚ್ಚಳ ಪಡುವವನು ಕರ್ತನಲ್ಲಿಯೇ ಹೆಚ್ಚಳಪಡಲಿ ಎಂದು ಬರೆಯಲ್ಪಟ್ಟಂತೆ ಆಯಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಕ್ರಿಸ್ತ ಯೇಸುವಿನಲ್ಲಿರುವದು ಆತನಿಂದಲೇ. ಕ್ರಿಸ್ತ ಯೇಸು ನಮಗೆ ದೇವರ ಕಡೆಯಿಂದ ಜ್ಞಾನವೂ ನೀತಿ ಶುದ್ಧೀಕರಣ ವಿಮೋಚನೆಗಳಿಗೆ ಕಾರಣನೂ ಆದನು.
Kannada Bible (KNCL) BSI 2016
ಅವರ ಕೃಪೆಯಿಂದಲೇ ನೀವು ಕ್ರಿಸ್ತಯೇಸುವಿನಲ್ಲಿ ಬಾಳುತ್ತಾ ಇದ್ದೀರಿ; ಅವರ ಕೃಪೆಯಿಂದಲೇ ಕ್ರಿಸ್ತಯೇಸು ನಮಗೆ ಜ್ಞಾನ ಮೂಲವಾಗಿದ್ದಾರೆ. ದೇವರಿಂದ ನಮಗೆ ದೊರಕುವ ಸತ್ಸಂಬಂಧ, ಪಾವನತೆ ಹಾಗೂ ವಿಮೋಚನೆ ಆ ಕ್ರಿಸ್ತಯೇಸುವಿನಿಂದಲೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ದೇವರಿಂದಲೇ ಕ್ರಿಸ್ತ ಯೇಸುವಿನಲ್ಲಿದ್ದೀರಿ. ಕ್ರಿಸ್ತ ಯೇಸು ನಮಗೆ ದೇವರ ಕಡೆಯಿಂದ ಜ್ಞಾನವೂ ನೀತಿಯೂ ಶುದ್ಧೀಕರಣವೂ ವಿಮೋಚನೆಯೂ ಆಗಿದ್ದಾರೆ.