1 Corinthians 1:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವರು ಕ್ರಿಸ್ತ ಯೇಸುವಿನ ಮೂಲಕ ನಿಮಗೆ ಕೊಟ್ಟಿರುವ ಕೃಪೆಯ ನಿಮಿತ್ತವಾಗಿ ನಾನು ನಿಮಗೋಸ್ಕರ ದೇವರಿಗೆ ಯಾವಾಗಲೂ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕ್ರಿಸ್ತ ಯೇಸುವಿನಲ್ಲಿ ದೇವರು ನಿಮಗೆ ಅನುಗ್ರಹಿಸಿದ ಕೃಪೆಯ ನಿಮಿತ್ತವಾಗಿ ನಾನು ನಿಮಗೋಸ್ಕರ ಯಾವಾಗಲೂ ನನ್ನ ದೇವರನ್ನು ಕೊಂಡಾಡುತ್ತೇನೆ.
Kannada BSI Bible 2016
ಯೇಸು ಕ್ರಿಸ್ತನಿಂದ ದೇವರು ನಿಮಗೆ ಅನುಗ್ರಹಿ ಸಿದ ಕೃಪೆಯ ನಿಮಿತ್ತ ನಾನು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರನ್ನು ಕೊಂಡಾಡುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕ್ರಿಸ್ತ ಯೇಸುವಿನಲ್ಲಿ ದೇವರು ನಿಮಗೆ ಅನುಗ್ರಹಿಸಿದ ಕೃಪೆಯ ನಿವಿುತ್ತ ನಾನು ನಿಮ್ಮ ವಿಷಯದಲ್ಲಿ ಯಾವಾಗಲೂ ದೇವರನ್ನು ಕೊಂಡಾಡುತ್ತೇನೆ.
Kannada Bible (KNCL) BSI 2016
ಕ್ರಿಸ್ತಯೇಸುವಿನಲ್ಲಿ ನಿಮಗೆ ಕೊಡಲಾಗಿರುವ ದೇವಾನುಗ್ರಹದ ಸಲುವಾಗಿ ನಾನು ನಿಮಗೋಸ್ಕರ ನನ್ನ ದೇವರಿಗೆ ಸತತವಾಗಿ ಕೃತಜ್ಞತೆಯನ್ನು ಸಲ್ಲಿಸುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕ್ರಿಸ್ತ ಯೇಸುವಿನಲ್ಲಿ ನಿಮಗೆ ಕೊಟ್ಟಿರುವ ದೇವರ ಕೃಪೆಯ ಕಾರಣಕ್ಕಾಗಿ ನಾನು ಯಾವಾಗಲೂ ನಿಮಗೋಸ್ಕರ ಅವರಿಗೆ ಕೃತಜ್ಞತೆ ಹೇಳುವವನಾಗಿದ್ದೇನೆ.