1 Corinthians 1:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೇಸುವಿನಲ್ಲಿ ಸಕಲ ಆಶೀರ್ವಾದಗಳನ್ನು ಹೊಂದಿರುವ ನೀವು ವಾಕ್ಚತುರರೂ ಜ್ಞಾನಸಂಪನ್ನರೂ ಆಗಿದ್ದೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆತನು ಎಲ್ಲಾ ರೀತಿಯಲ್ಲಿಯೂ, ಎಲ್ಲಾ ನುಡಿಗಳಲ್ಲಿಯೂ, ಎಲ್ಲಾ ತಿಳಿವಳಿಕೆಯಲ್ಲಿಯೂ, ನಿಮ್ಮನ್ನು ಸಮೃದ್ಧಿಯುಳ್ಳವರನ್ನಾಗಿ ಮಾಡಿದ್ದಾನೆ.
Kannada BSI Bible 2016
ಹೀಗೆ ನೀವು ಎಲ್ಲಾ ನುಡಿಯಲ್ಲಿಯೂ ಸಕಲ ಜ್ಞಾನದಲ್ಲಿಯೂ ಪ್ರತಿಯೊಂದು ವಿಷಯದಲ್ಲಿ ಆತನಿಂದ ಸಮೃದ್ಧಿ ಹೊಂದಿದವರಾಗಿದ್ದೀರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕಂದರೆ ಕ್ರಿಸ್ತನ ವಿಷಯವಾದ ಸಾಕ್ಷಿಯು ನಿಮ್ಮಲ್ಲಿ ದೃಢವಾಗಿ ನೆಲೆಗೊಂಡ ಕಾರಣ ನೀವು ಎಲ್ಲಾ ನುಡಿಯಲ್ಲಿಯೂ ಎಲ್ಲಾ ತಿಳುವಳಿಕೆಯಲ್ಲಿಯೂ ಆತನಲ್ಲಿ ಸಮೃದ್ಧಿ ಹೊಂದಿದವರಾಗಿದ್ದೀರಿ.
Kannada Bible (KNCL) BSI 2016
ಏಕೆಂದರೆ, ಕ್ರಿಸ್ತಯೇಸುವಿನಲ್ಲಿ ನೀವು ಎಲ್ಲ ದೃಷ್ಟಿಯಿಂದಲೂ ಶ್ರೀಮಂತರು, ಜ್ಞಾನಸಂಪನ್ನರು ಮತ್ತು ವಾಕ್‍ಚತುರರು ಆಗಿದ್ದೀರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಕ್ರಿಸ್ತ ಯೇಸುವಿನಲ್ಲಿ ಜ್ಞಾನದಲ್ಲಿಯೂ ಮಾತುಗಳಲ್ಲಿಯೂ ಎಲ್ಲಾ ಸಮೃದ್ಧಿಯನ್ನು ಹೊಂದಿದ್ದೀರಿ.