1 Corinthians 1:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗಿರಲು, ನಮ್ಮ ಪ್ರಭುವಾದ ಯೇಸು ಕ್ರಿಸ್ತನ ಪುನರಾಗಮನವನ್ನು ಎದುರುನೋಡುತ್ತಿರುವ ನೀವು ದೇವರಿಂದ ಬರುವ ಪ್ರತಿಯೊಂದು ವರವನ್ನು ಹೊಂದಿದವರಾಗಿದ್ದೀರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯನ್ನು ನೀವು ಎದುರುನೋಡುತ್ತಾ ಇರುವುದರಿಂದ ಆತ್ಮೀಕ ಕೃಪಾವರದ ಕೊರತೆಯೂ ನಿಮಗೆ ಉಂಟಾಗುವುದಿಲ್ಲ,
Kannada BSI Bible 2016
ಹೀಗಿ ರಲಾಗಿ ನೀವು ಯಾವದರಲ್ಲಿಯೂ ಕೊರತೆಯಿಲ್ಲದವರಾಗಿದ್ದು ನಮ್ಮ ಕರ್ತನಾದ ಯೇಸು ಕ್ರಿಸ್ತನ ಬರೋಣಕ್ಕಾಗಿ ಎದುರು ನೋಡುವವರಾಗಿದ್ದೀರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ನೀವು ಯಾವ ಕೃಪಾವರದಲ್ಲಿಯೂ ಕೊರತೆಯಿಲ್ಲದವರಾಗಿ ನಮ್ಮ ಕರ್ತನಾದ ಯೇಸು ಕ್ರಿಸ್ತನ ಪ್ರತ್ಯಕ್ಷತೆಯನ್ನು ಎದುರುನೋಡುತ್ತಾ ಇದ್ದೀರಿ.
Kannada Bible (KNCL) BSI 2016
ಇದರಿಂದಾಗಿ ನಮ್ಮ ಪ್ರಭು ಯೇಸುಕ್ರಿಸ್ತರು ಪ್ರತ್ಯಕ್ಷವಾಗುವುದನ್ನೇ ಎದುರುನೋಡುತ್ತಿರುವ ನಿಮಗೆ ಯಾವ ಕೃಪಾಶೀರ್ವಾದಗಳ ಕೊರತೆಯು ಇಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗಿರುವುದರಿಂದ ನಮ್ಮ ಪ್ರಭುವಾದ ಕ್ರಿಸ್ತ ಯೇಸುವಿನ ಪುನರಾಗಮನವನ್ನು ಆತುರದಿಂದ ಎದುರು ನೋಡುವವರಾದ ನಿಮಗೆ, ಯಾವುದೇ ಆತ್ಮಿಕ ವರಗಳ ಕೊರತೆಯು ಇರುವುದಿಲ್ಲ.