1 Corinthians 1:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೇಸುವು ನಿಮ್ಮನ್ನು ಕೊನೆಯವರೆಗೂ ದೃಢಪಡಿಸಿ ಕಾಪಾಡುವನು. ನಮ್ಮ ಪ್ರಭುವಾದ ಯೇಸು ಕ್ರಿಸ್ತನು ಮತ್ತೆ ಬಂದಾಗ ನೀವು ನಿರ್ದೋಷಿಗಳಾಗಿರುವಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ನೀವು ನಿರಪರಾಧಿಗಳಾಗಿರುವಂತೆ ಆತನು ನಿಮ್ಮನ್ನು ಕಡೆಯವರೆಗೂ ದೃಢಪಡಿಸುವನು.
Kannada BSI Bible 2016
ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ಯಾರೂ ನಿಮ್ಮ ಮೇಲೆ ತಪ್ಪುಹೊರಿಸದಂತೆ ಆತನು ನಿಮ್ಮನ್ನು ಕಡೇವರೆಗೂ ದೃಢಪಡಿಸುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಮ್ಮ ಕರ್ತನಾದ ಯೇಸು ಕ್ರಿಸ್ತನ ದಿನದಲ್ಲಿ ಯಾರೂ ನಿಮ್ಮ ಮೇಲೆ ತಪ್ಪು ಹೊರಿಸಲಾಗದಂತೆ ಆತನು ನಿಮ್ಮನ್ನು ಕಡೇವರೆಗೂ ದೃಢಪಡಿಸುವನು.
Kannada Bible (KNCL) BSI 2016
ನಮ್ಮ ಪ್ರಭು ಯೇಸುಕ್ರಿಸ್ತರ ದಿನದಂದು ನೀವು ನಿರ್ದೋಷಿಗಳಾಗಿರುವಂತೆ ಆ ದೇವರೇ, ನಿಮ್ಮನ್ನು ಕಡೆಯವರೆಗೂ ಸ್ಥಿರವಾಗಿ ಕಾಪಾಡುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಮಗೆ ಕರ್ತ ಆಗಿರುವ ಯೇಸುಕ್ರಿಸ್ತರ ದಿನದಲ್ಲಿ ನೀವು ನಿರ್ದೋಷಿಗಳಾಗಿರುವಂತೆ ಅವರು ಕೊನೆಯತನಕವೂ ನಿಮ್ಮನ್ನು ಬಲಪಡಿಸಿ ಕಾಯುವರು.