1 Corinthians 10:1 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಹೋದರ ಸಹೋದರಿಯರೇ, ಮೋಶೆಯನ್ನು ಅನುಸರಿಸಿದ ನಮ್ಮ ಪಿತೃಗಳಿಗೆ ಏನು ಸಂಭವಿಸಿತೆಂಬುದನ್ನು ನೀವು ತಿಳಿದುಕೊಳ್ಳಬೇಕೆಂದು ನಾನು ಅಪೇಕ್ಷಿಸುತ್ತೇನೆ. ಅವರೆಲ್ಲರೂ ಮೋಡದ ಕೆಳಗಿದ್ದರು; ಸಮುದ್ರದ ಮೂಲಕ ನಡೆದುಕೊಂಡು ಹೋದರು;
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಹೋದರರೇ, ನಾನು ನಿಮಗೆ ತಿಳಿಸಲು ಅಪೇಕ್ಷಿಸುವ ಸಂಗತಿ ಏನೆಂದರೆ, ನಮ್ಮ ಪೂರ್ವಿಕರೆಲ್ಲರೂ ಮೇಘದ ಅಡಿಯಲ್ಲಿದ್ದು ಸಮುದ್ರವನ್ನು ದಾಟಿಹೋದರು.
Kannada BSI Bible 2016
ಇದಲ್ಲದೆ ಸಹೋದರರೇ, ನೀವು ಈ ವಿಷಯಗಳನ್ನು ಅರಿಯದವರಾಗಿರ ಬಾರದೆಂದು ನನ್ನ ಅಪೇಕ್ಷೆಯಲ್ಲ; ಅದೇನಂದರೆ--ನಮ್ಮ ಪಿತೃಗಳೆಲ್ಲರೂ ಮೇಘದ ಕೆಳಗೆ ಇದ್ದು ಸಮುದ್ರವನ್ನು ದಾಟಿದರು;
Kannada BSI JV (ಕನ್ನಡ ಸತ್ಯವೇದವು J.V. (BSI))
ಸಹೋದರರೇ, ಮುಂದಿನ ಸಂಗತಿಯಲ್ಲಿ ನೀವು ಲಕ್ಷ್ಯವಿಡಬೇಕೆಂದು ನಾನು ಅಪೇಕ್ಷಿಸುತ್ತೇನೆ. ಅದೇನಂದರೆ, ನಮ್ಮ ಪಿತೃಗಳೆಲ್ಲರೂ ಮೇಘದ ನೆರಳಿನಲ್ಲಿದ್ದರು;
Kannada Bible (KNCL) BSI 2016
ಪ್ರಿಯ ಸಹೋದರರೇ, ನಮ್ಮ ಪೂರ್ವಜರಿಗೆ ಸಂಭವಿಸಿದವುಗಳತ್ತ ನಿಮ್ಮ ಗಮನವನ್ನು ಸೆಳೆಯಬೇಕೆಂದಿದ್ದೇನೆ. ಅವರೆಲ್ಲರೂ ಮೋಡದ ನೆರಳಿನಲ್ಲಿಯೇ ನಡೆದರು. ಎಲ್ಲರೂ ಸಮುದ್ರವನ್ನು ಸುರಕ್ಷಿತವಾಗಿ ದಾಟಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರಿಯರೇ, ನಮ್ಮ ಪಿತೃಗಳೆಲ್ಲರೂ ಮೇಘದ ನೆರಳಿನಲ್ಲಿದ್ದರು, ಅವರೆಲ್ಲರೂ ಸಮುದ್ರವನ್ನು ಹಾದುಹೋದರು ಎಂಬ ವಿಷಯದಲ್ಲಿ ನೀವು ಅಜ್ಞಾನಿಗಳಾಗಿರಬಾರದೆಂದು ಅಪೇಕ್ಷಿಸುತ್ತೇನೆ.