1 Corinthians 10:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಜನರಿಗೆ ಸಂಭವಿಸಿದ ಸಂಗತಿಗಳು ನಮಗೆ ನಿದರ್ಶನಗಳಾಗಿವೆ. ನಮ್ಮನ್ನು ಎಚ್ಚರಿಸುವುದಕ್ಕಾಗಿ ಆ ಸಂಗತಿಗಳನ್ನು ಬರೆದಿಡಲಾಗಿದೆ. ಈಗ ನಾವು ಯುಗದ ಅಂತಿಮ ಕಾಲದಲ್ಲಿ ಜೀವಿಸುತ್ತಿದ್ದೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರಿಗೆ ಸಂಭವಿಸಿದ ಈ ಸಂಗತಿಗಳು ನಿದರ್ಶನರೂಪವಾಗಿವೆ. ಮತ್ತು ಯುಗಾಂತ್ಯಕ್ಕೆ ಬಂದಿರುವವರಾದ ನಮಗೆ ಇದು ಎಚ್ಚರಿಕೆಯ ಮಾತುಗಳಾಗಿ ಬರೆದಿವೆ.
Kannada BSI Bible 2016
ಅವರಿಗೆ ಸಂಭವಿಸಿದ ಈ ಎಲ್ಲಾ ಸಂಗತಿಗಳು ನಿದರ್ಶನಗಳಾಗಿವೆ; ಲೋಕದ ಅಂತ್ಯಕ್ಕೆ ಬಂದಿರುವ ವರಾದ ನಮಗೆ ಅವು ಬುದ್ಧಿವಾದಗಳಾಗಿ ಬರೆದವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರಿಗೆ ಸಂಭವಿಸಿದ ಈ ಸಂಗತಿಗಳು ನಿದರ್ಶನರೂಪವಾಗಿವೆ; ಮತ್ತು ಯುಗಾಂತ್ಯಕ್ಕೆ ಬಂದಿರುವವರಾದ ನಮಗೆ ಬುದ್ಧಿವಾದಗಳಾಗಿ ಬರೆದವೆ.
Kannada Bible (KNCL) BSI 2016
ಇದೆಲ್ಲ ಅವರಿಗೆ ಸಂಭವಿಸಿದುದು ಇತರರಿಗೆ ನಿದರ್ಶನವಾಗಿರಲೆಂದು. ಇವುಗಳನ್ನು ಬರೆದಿಟ್ಟಿರುವುದು, ಯುಗಾಂತ್ಯಕ್ಕೆ ಬಂದಿರುವ ನಮಗೆ ಮುನ್ನೆಚ್ಚರಿಕೆಯಾಗಿರಲೆಂದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಮನುಷ್ಯರಿಗೆ ಸಂಭವಿಸಿದ ಈ ಸಂಗತಿಗಳು ನಿದರ್ಶನಗಳಾಗಿವೆ, ಯುಗಾಂತ್ಯಕ್ಕೆ ಬಂದಿರುವ ನಮಗೆ ಎಚ್ಚರಿಕೆಯ ಮಾತುಗಳಾಗಿವೆ.