1 Corinthians 10:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾವು ದ್ರಾಕ್ಷಾರಸದ ಪಾತ್ರೆಗಾಗಿ ದೇವರಿಗೆ ಸ್ತೋತ್ರ ಸಲ್ಲಿಸಿ ಕುಡಿಯುವಾಗ ಕ್ರಿಸ್ತನ ರಕ್ತದಲ್ಲಿ ಪಾಲುಗಾರರಾಗಲಿಲ್ಲವೇ? ನಾವು ರೊಟ್ಟಿಯನ್ನು ಮುರಿದು ತಿನ್ನುವಾಗ ಕ್ರಿಸ್ತನ ದೇಹದಲ್ಲಿ ಪಾಲುಗಾರರಾಗಲಿಲ್ಲವೇ?
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ದೇವರ ಸ್ತೋತ್ರಮಾಡಿ ಪಾನಪಾತ್ರೆಯಲ್ಲಿ ಪಾನ ಮಾಡುವುದು ಕ್ರಿಸ್ತನ ರಕ್ತದಲ್ಲಿ ಪಾಲುಗಾರರಾಗಿದ್ದೇವೆಂಬುದನ್ನು ಸೂಚಿಸುತ್ತದಲ್ಲವೇ? ನಾವು ರೊಟ್ಟಿಯನ್ನು ಮುರಿದು ತಿನ್ನುವುದು ಕ್ರಿಸ್ತನ ದೇಹದಲ್ಲಿ ಪಾಲುಗಾರರಾಗಿದ್ದೇವೆಂಬುದನ್ನು ಸೂಚಿಸುತ್ತದಲ್ಲವೇ?
Kannada BSI Bible 2016
ನಾವು ಸ್ತೋತ್ರಸಲ್ಲಿಸುವ ಸ್ತೋತ್ರದ ಪಾತ್ರೆಯು ಕ್ರಿಸ್ತನ ರಕ್ತದ ಅನ್ಯೋನ್ಯತೆ ಯಲ್ಲವೋ? ನಾವು ಮುರಿಯುವ ರೊಟ್ಟಿಯು ಕ್ರಿಸ್ತನ ದೇಹದ ಅನ್ಯೋನ್ಯತೆಯಲ್ಲವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ದೇವಸ್ತೋತ್ರಮಾಡಿ ಪಾತ್ರೆಯಲ್ಲಿ ಪಾನಮಾಡುವದು ಕ್ರಿಸ್ತನ ರಕ್ತದಲ್ಲಿ ಪಾಲುಗಾರರಾಗಿದ್ದೇವೆಂಬದನ್ನು ಸೂಚಿಸುತ್ತದಲ್ಲವೇ. ನಾವು ರೊಟ್ಟಿಯನ್ನು ಮುರಿದು ತಿನ್ನುವದು ಕ್ರಿಸ್ತನ ದೇಹದಲ್ಲಿ ಪಾಲುಗಾರರಾಗಿದ್ದೇವೆಂಬದನ್ನು ಸೂಚಿಸುತ್ತದಲ್ಲವೇ.
Kannada Bible (KNCL) BSI 2016
ನಾವು ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸಿ ಪಾನಪಾತ್ರೆಯಿಂದ ಕುಡಿಯುವಾಗ ಕ್ರಿಸ್ತಯೇಸುವಿನ ರಕ್ತದಲ್ಲಿ ಪಾಲುಗೊಳ್ಳುತ್ತೇವಲ್ಲವೇ? ರೊಟ್ಟಿಯನ್ನು ಮುರಿದು ತಿನ್ನುವಾಗ ಕ್ರಿಸ್ತಯೇಸುವಿನ ಶರೀರದಲ್ಲಿ ಪಾಲುಗೊಳ್ಳುತ್ತೇವಲ್ಲವೇ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾವು ಸ್ತೋತ್ರಮಾಡಿ ಕುಡಿಯುವ ಸ್ತೋತ್ರದ ಪಾತ್ರೆಯು ಕ್ರಿಸ್ತ ಯೇಸುವಿನ ರಕ್ತದ ಅನ್ಯೋನ್ಯತೆಯಲ್ಲವೇ? ನಾವು ಮುರಿಯುವ ರೊಟ್ಟಿಯು ಕ್ರಿಸ್ತನ ದೇಹದಲ್ಲಿಯ ಅನ್ಯೋನ್ಯತೆಯಲ್ಲವೇ?