1 Corinthians 10:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ವಿಗ್ರಹಕ್ಕೆ ಅರ್ಪಿತವಾದ ಆಹಾರಪದಾರ್ಥವು ಮುಖ್ಯವಾದದ್ದೆಂದು ನಾನು ಹೇಳುತ್ತಿಲ್ಲ. ಅಲ್ಲದೆ ವಿಗ್ರಹವು ಮುಖ್ಯವಾದದ್ದು ಎಂಬ ಅಭಿಪ್ರಾಯವೂ ನನಗಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಾಗಾದರೆ ನಾನು ಏನು ಹೇಳಿದ ಹಾಗಾಯಿತು? ವಿಗ್ರಹಕ್ಕೆ ಅರ್ಪಿಸಿದ ಆಹಾರಪದಾರ್ಥವು ವಾಸ್ತವವೆಂದೋ ಅಥವಾ ವಿಗ್ರಹವು ವಾಸ್ತವವೆಂದು ನನ್ನ ಅಭಿಪ್ರಾಯವೋ? ಅಲ್ಲ,
Kannada BSI Bible 2016
ಹಾಗಾದರೆ ನಾನು ಏನು ಹೇಳಲಿ? ವಿಗ್ರಹವು ಏನಾದರೂ ವಿಶೇಷವೋ? ಇಲ್ಲವೆ ವಿಗ್ರಹಗಳಿಗೆ ಯಜ್ಞಾರ್ಪಣೆ ಮಾಡಿದ್ದು ಏನಾದರೂ ವಿಶೇಷವೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ಹೇಳುವದರಿಂದ ಏನು ಹೇಳಿದ ಹಾಗಾಯಿತು? ವಿಗ್ರಹಕ್ಕೆ ನೈವೇದ್ಯ ಮಾಡಿದ ಪದಾರ್ಥವು ವಾಸ್ತವವೆಂದು ಅಥವಾ ವಿಗ್ರಹವು ವಾಸ್ತವವೆಂದು ನನ್ನ ಅಭಿಪ್ರಾಯವೋ? ಅಲ್ಲ.
Kannada Bible (KNCL) BSI 2016
ಹೀಗೆ ನಾನು ಹೇಳುವಾಗ ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥವು ವಾಸ್ತವವಾದುದು ಅಥವಾ ವಿಗ್ರಹವೇ ವಾಸ್ತವವಾದುದು ಎಂದು ಅರ್ಥವೇ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಾಗಾದರೆ ನಾನು ಹೇಳುವುದೇನು? ವಿಗ್ರಹಕ್ಕೆ ಅರ್ಪಿಸಿದ್ದು ಅಥವಾ ವಿಗ್ರಹಕ್ಕೆ ಏನಾದರೂ ಮಹತ್ವವಿರುತ್ತದೆಯೋ? ನಿಶ್ಚಯವಾಗಿಯೂ ಇಲ್ಲ.