1 Corinthians 10:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಹೇಳುತ್ತಿರುವುದೇನೆಂದರೆ, ಜನರು ವಿಗ್ರಹಗಳಿಗೆ ಅರ್ಪಿಸಿದ ಪದಾರ್ಥಗಳು ದೆವ್ವಗಳಿಗೆ ಅರ್ಪಿತವಾದುವುಗಳೇ ಹೊರತು ದೇವರಿಗಲ್ಲ. ನೀವು ದೆವ್ವಗಳೊಂದಿಗೆ ಯಾವ ವಿಷಯದಲ್ಲಿಯೂ ಪಾಲು ಹೊಂದಬಾರದೆಂಬುದು ನನ್ನ ಆಸೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಅನ್ಯಜನರು ತಾವು ಅರ್ಪಿಸುವ ಬಲಿಗಳನ್ನು ದೇವರಿಗಲ್ಲ, ದೆವ್ವಗಳಿಗೆ ಅರ್ಪಿಸುತ್ತಾರೆಂಬುದು ನನ್ನ ಅಭಿಪ್ರಾಯವು. ನೀವು ದೆವ್ವಗಳೊಡನೆ ಪಾಲುಗಾರರಾಗಿರಬೇಕೆಂಬುದು ನನ್ನ ಇಷ್ಟವಲ್ಲ.
Kannada BSI Bible 2016
ಆದರೆ ಅನ್ಯಜನರು ಯಜ್ಞಾರ್ಪಣೆ ಮಾಡುವದು ದೆವ್ವಗಳಿಗೆ, ದೇವರಿಗಲ್ಲ; ನೀವು ದೆವ್ವಗಳೊಂದಿಗೆ ಅನ್ಯೋನ್ಯವಾಗಿರಬೇಕೆಂದು ನಾನು ಇಷ್ಟಪಡುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಅನ್ಯಜನರು ತಾವು ಅರ್ಪಿಸುವ ಬಲಿಗಳನ್ನು ದೇವರಿಗಲ್ಲ ದೆವ್ವಗಳಿಗೆ ಅರ್ಪಿಸುತ್ತಾರೆಂದು ನನ್ನ ಅಭಿಪ್ರಾಯವು. ನೀವು ದೆವ್ವಗಳೊಡನೆ ಭಾಗಿಗಳಾಗಿರಬೇಕೆಂಬದು ನನ್ನ ಇಷ್ಟವಲ್ಲ.
Kannada Bible (KNCL) BSI 2016
ಯಾವುದೂ ಅಲ್ಲ. ನಾನು ಹೇಳುವುದೇನೆಂದರೆ: ಅನ್ಯಜನರು ಬಲಿಯನ್ನು ದೆವ್ವಗಳಿಗೆ ಅರ್ಪಿಸುತ್ತಾರೆ ಹೊರತು ದೇವರಿಗಲ್ಲ. ಹೀಗೆ ನೀವು ದೆವ್ವಗಳೊಂದಿಗೆ ಭಾಗಿಯಾಗುವುದನ್ನು ನಾನೆಂದಿಗೂ ಇಷ್ಟಪಡುವುದಿಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯೆಹೂದ್ಯರಲ್ಲದವರು ಅರ್ಪಿಸುವ ಯಜ್ಞ ದೇವರಿಗಲ್ಲ, ದೆವ್ವಗಳಿಗೆ ಅರ್ಪಿಸುವಂತದ್ದಾಗಿದೆ. ನೀವು ದೆವ್ವಗಳೊಂದಿಗೆ ಭಾಗಿಗಳಾಗಿರಬೇಕೆಂಬುದು ನನ್ನ ಇಷ್ಟವಲ್ಲ.