1 Corinthians 10:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ಪ್ರಭುವಿನ ಪಾತ್ರೆ ಮತ್ತು ದೆವ್ವಗಳ ಪಾತ್ರೆ ಇವುಗಳೊಳಗೆ ಒಂದರಲ್ಲಿಯೇ ಹೊರತು ಎರಡರಲ್ಲಿಯೂ ಕುಡಿಯಲಾಗದು. ಪ್ರಭುವಿನ ಪಂಕ್ತಿ ಮತ್ತು ದೆವ್ವಗಳ ಪಂಕ್ತಿ ಇವುಗಳೊಳಗೆ ಒಂದರಲ್ಲಿಯೇ ಹೊರತು ಎರಡರಲ್ಲಿಯೂ ಊಟ ಮಾಡಲಾರಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಕರ್ತನ ಪಾನಪಾತ್ರೆಯಲ್ಲಿಯೂ ಹಾಗೂ ದೆವ್ವಗಳ ಪಾನಪಾತ್ರೆಯಲ್ಲಿಯೂ ಕುಡಿಯಲಾರಿರಿ. ಕರ್ತನ ಪಂಕ್ತಿಯಲ್ಲಿಯೂ ಮತ್ತು ದೆವ್ವಗಳ ಪಂಕ್ತಿಯಲ್ಲಿಯೂ ಊಟಮಾಡಲಾರಿರಿ.
Kannada BSI Bible 2016
ನೀವು ಕರ್ತನಪಾತ್ರೆ ಯಲ್ಲಿಯೂ ದೆವ್ವಗಳ ಪಾತ್ರೆಯಲ್ಲಿಯೂ ಕುಡಿಯ ಲಾರಿರಿ; ನೀವು ಕರ್ತನ ಮೇಜಿನಲ್ಲಿಯೂ ದೆವ್ವಗಳ ಮೇಜಿನಲ್ಲಿಯೂ ಪಾಲುಗಾರರಾಗಲಾರಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ಕರ್ತನ ಪಾತ್ರೆ ಮತ್ತು ದೆವ್ವಗಳ ಪಾತ್ರೆ ಇವುಗಳೊಳಗೆ ಒಂದರಲ್ಲಿಯೇ ಹೊರತು ಎರಡರಲ್ಲಿಯೂ ಕುಡಿಯಲಾರಿರಿ; ಕರ್ತನ ಪಂಕ್ತಿ ಮತ್ತು ದೆವ್ವಗಳ ಪಂಕ್ತಿ ಇವುಗಳೊಳಗೆ ಒಂದರಲ್ಲಿಯೇ ಹೊರತು ಎರಡರಲ್ಲಿಯೂ ಊಟಮಾಡಲಾರಿರಿ.
Kannada Bible (KNCL) BSI 2016
ನೀವು ಪ್ರಭುವಿನ ಪಾತ್ರೆಯಿಂದ ಹಾಗೂ ದೆವ್ವಗಳ ಪಾತ್ರೆಯಿಂದ ಕುಡಿಯಲಾಗದು. ಪ್ರಭುವಿನ ಪಂಕ್ತಿಯಲ್ಲೂ ಅಂತೆಯೇ ದೆವ್ವಗಳ ಪಂಕ್ತಿಯಲ್ಲೂ ಊಟಮಾಡಲಾಗದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಕರ್ತದೇವರ ಪಾತ್ರೆಯಲ್ಲಿಯೂ ದೆವ್ವಗಳ ಪಾತ್ರೆಯಲ್ಲಿಯೂ ಕುಡಿಯಲಾರಿರಿ. ನೀವು ಕರ್ತದೇವರ ಪಂಕ್ತಿಯಲ್ಲಿಯೂ ದೆವ್ವಗಳ ಪಂಕ್ತಿಯಲ್ಲಿಯೂ ಭಾಗಿಗಳಾಗಿರಲಾರಿರಿ.