1 Corinthians 10:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮಾಂಸದ ಮಾರುಕಟ್ಟೆಯಲ್ಲಿ ಮಾರುವ ಯಾವ ಮಾಂಸವನ್ನಾದರೂ ತಿನ್ನಿರಿ. ನೀವು ತಿನ್ನಬಾರದೆಂದು ಯೋಚಿಸುವ ಮಾಂಸದಂತೆ ಅದು ತೋರಿದರೂ ಆ ಮಾಂಸದ ಬಗ್ಗೆ ಯಾವ ಪ್ರಶ್ನೆಗಳನ್ನೂ ಕೇಳಬೇಡಿರಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಾಂಸದ ಅಂಗಡಿಯಲ್ಲಿ ಮಾರುವಂಥದ್ದು ಏನಿದ್ದರೂ ಅದನ್ನು ಮನಸ್ಸಾಕ್ಷಿಯಲ್ಲಿ ಸಂಶಯ ಹುಟ್ಟಿಸುವಂತೆ ವಿಚಾರ ಮಾಡದೇ ತಿನ್ನಿರಿ.
Kannada BSI Bible 2016
ಕಟುಕರ ಅಂಗಡಿಯಲ್ಲಿ ಮಾರುವದೇನಿದ್ದರೂ ಮನಸ್ಸಾಕ್ಷಿಯ ನಿಮಿತ್ತ ಯಾವ ಪ್ರಶ್ನೆಯನ್ನೂ ಕೇಳದೆ ತಿನ್ನಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರತಿಯೊಬ್ಬನು ತನ್ನ ಹಿತವನ್ನು ಚಿಂತಿಸದೆ ಪರಹಿತವನ್ನು ಚಿಂತಿಸಲಿ. ಕಟುಕರ ಅಂಗಡಿಯಲ್ಲಿ ಮಾರುವಂಥದು ಏನಿದ್ದರೂ ಅದನ್ನು ಮನಸ್ಸಿನಲ್ಲಿ ಸಂಶಯ ಹುಟ್ಟಿಸುವ ವಿಚಾರಣೆಮಾಡದೆ ತಿನ್ನಿರಿ.
Kannada Bible (KNCL) BSI 2016
ಮನಸ್ಸಾಕ್ಷಿಯನ್ನು ಕೆದಕುವ ಪ್ರಶ್ನೆಗಳಿಗೆ ಎಡೆಕೊಡದೆ ಮಾಂಸದ ಮಾರುಕಟ್ಟೆಯಲ್ಲಿ ಮಾರುವುದೆಲ್ಲವನ್ನೂ ನೀವು ತಂದು ತಿನ್ನಬಹುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಾಂಸದ ಅಂಗಡಿಯಲ್ಲಿ ಮಾರುವುದು ಏನಿದ್ದರೂ ಮನಸ್ಸಾಕ್ಷಿಯನ್ನು ಪ್ರಶ್ನಿಸದೇ ತಿನ್ನಿರಿ.