1 Corinthians 10:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕ್ರಿಸ್ತ ವಿಶ್ವಾಸಿಯಲ್ಲದ ಒಬ್ಬನು ನಿಮ್ಮನ್ನು ಊಟಕ್ಕೆ ಆಹ್ವಾನಿಸಿದರೆ, ಹೋಗುವುದಕ್ಕೆ ನಿಮಗೆ ಇಷ್ಟವಿದ್ದರೆ, ಅವನು ನಿಮಗೆ ಏನು ಬಡಿಸಿದರೂ ತಿನ್ನಿರಿ. ನೀವು ಆ ಪದಾರ್ಥವನ್ನು ತಿನ್ನಬೇಕೇ ಅಥವಾ ತಿನ್ನಬಾರದೇ ಎಂದು ನಿರ್ಧರಿಸಲು ಪ್ರಶ್ನೆಗಳನ್ನು ಕೇಳಬೇಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕ್ರಿಸ್ತನನ್ನು ನಂಬದವರಲ್ಲಿ ಒಬ್ಬನು ನಿಮ್ಮನ್ನು ಊಟಕ್ಕೆ ಕರೆಯುವಾಗ ಹೋಗುವುದಕ್ಕೆ ನಿಮಗಿಷ್ಟವಿದ್ದರೆ ನಿಮಗೇನು ಬಡಿಸಿದರೂ ಮನಸ್ಸಾಕ್ಷಿಯನ್ನು ಪ್ರಶ್ನಿಸದೇ ಅದನ್ನು ತಿನ್ನಿರಿ.
Kannada BSI Bible 2016
ನಂಬದವರಲ್ಲಿ ಯಾವನಾದರೂ ನಿಮ್ಮನ್ನು ಊಟಕ್ಕೆ ಕರೆಯುವಾಗ ಹೋಗುವದಕ್ಕೆ ನಿಮಗಿಷ್ಟವಿದ್ದರೆ ನಿಮ ಗೇನು ಬಡಿಸಿದರೂ ಅದನ್ನು ಮನಸ್ಸಾಕ್ಷಿಯ ನಿಮಿತ್ತ ಯಾವ ಪ್ರಶ್ನೆಯನ್ನೂ ಕೇಳದೆ ತಿನ್ನಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕ್ರಿಸ್ತನನ್ನು ನಂಬದವರಲ್ಲಿ ಒಬ್ಬನು ನಿಮ್ಮನ್ನು ಊಟಕ್ಕೆ ಕರೆಯುವಾಗ ಹೋಗುವದಕ್ಕೆ ನಿಮಗಿಷ್ಟವಿದ್ದರೆ ನಿಮಗೇನು ಬಡಿಸಿದರೂ ಅದನ್ನು ಮನಸ್ಸಿನಲ್ಲಿ ಸಂಶಯ ಹುಟ್ಟಿಸುವ ವಿಚಾರಣೆಮಾಡದೆ ತಿನ್ನಿರಿ.
Kannada Bible (KNCL) BSI 2016
ಕ್ರೈಸ್ತವಿಶ್ವಾಸಿ ಅಲ್ಲದವನು, ನಿಮ್ಮನ್ನು ಊಟಕ್ಕೆ ಕರೆದಾಗ, ನಿಮಗಿಷ್ಟವಿದ್ದರೆ ಹೋಗಿರಿ; ಮನಸ್ಸಾಕ್ಷಿಯನ್ನು ಕೆದಕುವ ಪ್ರಶ್ನೆಗಳಿಗೆ ಎಡೆಕೊಡದೆ ಅವನು ಬಡಿಸಿದ್ದನ್ನು ಊಟಮಾಡಿರಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವಿಶ್ವಾಸಿಗಳಲ್ಲಿ ಯಾವನಾದರೂ ನಿಮ್ಮನ್ನು ಊಟಕ್ಕೆ ಕರೆದಾಗ ನೀವು ಹೋಗಬಯಸಿದರೆ, ನಿಮ್ಮ ಮುಂದೆ ಬಡಿಸಿದ ಪ್ರತಿಯೊಂದನ್ನು ಮನಸ್ಸಾಕ್ಷಿ ನಿಮಿತ್ತ ಏನನ್ನೂ ಪ್ರಶ್ನಿಸದೆ ತಿನ್ನಿರಿ.