1 Corinthians 10:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಒಬ್ಬನು ನಿಮಗೆ, "ಆ ಪದಾರ್ಥವು ವಿಗ್ರಹಗಳಿಗೆ ಅರ್ಪಿತವಾದದ್ದು” ಎಂದು ಹೇಳಿದರೆ, ನೀವು ಅದನ್ನು ತಿನ್ನಬೇಡಿ. ನಿಮಗೆ ಹೇಳಿದ ವ್ಯಕ್ತಿಯ ನಂಬಿಕೆಯನ್ನು ಹಾಳುಮಾಡಲು ನಿಮಗೆ ಇಷ್ಟವಿಲ್ಲದ್ದರಿಂದ ಮತ್ತು ಆ ಮಾಂಸವನ್ನು ತಿನ್ನುವುದು ತಪ್ಪೆಂದು ಜನರು ಭಾವಿಸಿಕೊಂಡಿರುವುದರಿಂದ ನೀವು ಅದನ್ನು ತಿನ್ನಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ಒಬ್ಬನು ನಿಮಗೆ “ಇದು ವಿಗ್ರಹಾಲಯದಲ್ಲಿ ಬಲಿಕೊಟ್ಟದ್ದು” ಎಂದು ಹೇಳಿದರೆ ಈ ಸಂಗತಿಯನ್ನು ತಿಳಿಸಿದವನ ನಿಮಿತ್ತವಾಗಿಯೂ ಮನಸ್ಸಾಕ್ಷಿಯ ನಿಮಿತ್ತವಾಗಿಯೂ ಅದನ್ನು ತಿನ್ನಬೇಡಿರಿ.
Kannada BSI Bible 2016
ಆದರೆ ಒಬ್ಬನು ನಿಮಗೆ--ಇದು ವಿಗ್ರಹಕ್ಕೆ ಬಲಿಕೊಟ್ಟದ್ದು ಎಂದು ಹೇಳಿದರೆ ಈ ವಿಷಯವನ್ನು ತಿಳಿಸಿದವನ ನಿಮಿತ್ತ ವಾಗಿಯೂ ಮನಸ್ಸಾಕ್ಷಿಯ ನಿಮಿತ್ತವಾಗಿಯೂ ತಿನ್ನ ಬೇಡಿರಿ; ಭೂಮಿಯೂ ಅದರಲ್ಲಿರುವ ಸಮಸ್ತವೂ ಕರ್ತನದಾಗಿದೆಯಲ್ಲವೇ?
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ಒಬ್ಬನು ನಿಮಗೆ - ಇದು ವಿಗ್ರಹಾಲಯದಲ್ಲಿ ಬಲಿಕೊಟ್ಟದ್ದು ಎಂದು ಹೇಳಿದರೆ ಈ ಸಂಗತಿಯನ್ನು ತಿಳಿಸಿದವನ ನಿವಿುತ್ತವಾಗಿಯೂ ಮನಸ್ಸಿನಲ್ಲಿ ಸಂಶಯಕ್ಕೆ ಸ್ಥಳಕೊಡಬಾರದೆಂಬ ಕಾರಣದಿಂದಲೂ ತಿನ್ನಬೇಡಿರಿ.
Kannada Bible (KNCL) BSI 2016
ಆಗ ಯಾರಾದರೂ, “ಇದು ವಿಗ್ರಹಗಳಿಗೆ ಬಲಿಕೊಟ್ಟದ್ದು,” ಎಂದು ಹೇಳಿದರೆ, ಹಾಗೆ ತಿಳಿಸಿದವನ ಸಲುವಾಗಿ ಹಾಗೂ ಮನಸ್ಸಾಕ್ಷಿಯ ಸಲುವಾಗಿ ಅದನ್ನು ಊಟಮಾಡಬೇಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಯಾರಾದರೂ ನಿಮಗೆ, “ಇದು ನೈವೇದ್ಯ ಮಾಡಿದ್ದು,” ಎಂದು ಹೇಳಿದರೆ, ತಿಳಿಸಿದ ವ್ಯಕ್ತಿಯ ನಿಮಿತ್ತವೂ ಆ ವ್ಯಕ್ತಿಯ ಮನಸ್ಸಾಕ್ಷಿಯ ನಿಮಿತ್ತವೂ ತಿನ್ನಬೇಡಿರಿ.