1 Corinthians 10:33 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಸಹ ಹಾಗೆಯೇ ಮಾಡುತ್ತೇನೆ. ಎಲ್ಲರನ್ನು ಎಲ್ಲಾ ವಿಷಯಗಳಲ್ಲಿ ಮೆಚ್ಚಿಸಲು ನಾನು ಪ್ರಯತ್ನಿಸುತ್ತೇನೆ. ನನಗೆ ಹಿತಕರವಾದದ್ದನ್ನು ಮಾಡಲು ಇಷ್ಟಪಡದೆ ಬಹು ಜನರಿಗೆ ಹಿತಕರವಾದದ್ದನ್ನೇ ಮಾಡಲು ಪ್ರಯತ್ನಿಸುತ್ತೇನೆ. ಅವರು ರಕ್ಷಣೆ ಹೊಂದಬೇಕೆಂಬುದೇ ನನ್ನ ಅಪೇಕ್ಷೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನಂತೂ ಸ್ವಪ್ರಯೋಜನಕ್ಕಾಗಿ ಚಿಂತಿಸದೇ ಮನುಷ್ಯರೆಲ್ಲರು ರಕ್ಷಣೆ ಹೊಂದಬೇಕೆಂದು ಅವರ ಪ್ರಯೋಜನಕ್ಕಾಗಿ ಚಿಂತಿಸಿ, ಎಲ್ಲರನ್ನು ಎಲ್ಲಾ ವಿಷಯಗಳಲ್ಲಿ ಮೆಚ್ಚಿಸುವವನಾಗಿದ್ದೇನೆ.
Kannada BSI Bible 2016
ಇದಲ್ಲದೆ ನಾನಂತೂ ನನ್ನ ಸ್ವಪ್ರಯೊಜನವನ್ನೇ ನೋಡದೆ ಅನೇಕರು ರಕ್ಷಿಸಲ್ಪಡುವಂತೆ ಅವರ ಪ್ರಯೋಜನಕ್ಕಾಗಿ ಎಲ್ಲಾ ವಿಷಯಗಳಲ್ಲಿ ಎಲ್ಲರನ್ನು ಮೆಚ್ಚಿಸುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನಂತೂ ಸ್ವಪ್ರಯೋಜನಕ್ಕಾಗಿ ಚಿಂತಿಸದೆ ಮನುಷ್ಯರೆಲ್ಲರೂ ರಕ್ಷಣೆಹೊಂದಬೇಕೆಂದು ಅವರ ಪ್ರಯೋಜನಕ್ಕಾಗಿ ಚಿಂತಿಸಿ ಎಲ್ಲರನ್ನೂ ಎಲ್ಲಾ ವಿಷಯಗಳಲ್ಲಿ ಮೆಚ್ಚಿಸುವವನಾಗಿದ್ದೇನೆ.
Kannada Bible (KNCL) BSI 2016
ನಾನಂತೂ ನನ್ನ ಸ್ವಂತ ಹಿತವನ್ನು ಲೆಕ್ಕಿಸದೆ ಸರ್ವರ ಉದ್ಧಾರಕ್ಕಾಗಿ ಅವರ ಹಿತವನ್ನು ಅಪೇಕ್ಷಿಸಿ, ಎಲ್ಲರನ್ನೂ ಎಲ್ಲದರಲ್ಲೂ ಮೆಚ್ಚಿಸಲು ಪ್ರಯತ್ನಿಸುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನಂತೂ ಎಲ್ಲರನ್ನೂ, ಎಲ್ಲದರಲ್ಲೂ ಮೆಚ್ಚಿಸಲು ಶ್ರಮಿಸುವವನಾಗಿದ್ದೇನೆ. ಏಕೆಂದರೆ, ನಾನು ನನ್ನ ಸ್ವಂತ ಹಿತವನ್ನೇ ಹುಡುಕದೆ, ಅನೇಕರು ರಕ್ಷಣೆ ಹೊಂದಬೇಕೆಂದು ಇತರರ ಹಿತಕ್ಕಾಗಿ ಶ್ರಮಿಸುವವನಾಗಿದ್ದೇನೆ.