1 Corinthians 10:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರಲ್ಲಿ ಕೆಲವರು ಮಾಡಿದಂತೆ ನೀವು ವಿಗ್ರಹಗಳನ್ನು ಪೂಜಿಸಬೇಡಿ. “ಜನರು ತಿನ್ನಲು, ಕುಡಿಯಲು ಕುಳಿತುಕೊಂಡರು; ನೃತ್ಯ ಮಾಡಲು ಎದ್ದುನಿಂತರು” ಎಂದು ಪವಿತ್ರ ಗ್ರಂಥದಲ್ಲಿ ಬರೆದಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರಲ್ಲಿ ಕೆಲವರು ವಿಗ್ರಹಾರಾಧಕರಾಗಿದ್ದರು, “ಜನರು ತಿನ್ನುವುದಕ್ಕೂ, ಕುಡಿಯುವುದಕ್ಕೂ ಕುಳಿತುಕೊಂಡರು. ಕಾಮಾಭಿಲಾಷೆಯಿಂದ ಕುಣಿದಾಡುವುದಕ್ಕೆ ಎದ್ದರು” ಎಂದು ಬರೆದಿದೆಯಲ್ಲಾ. ನೀವು ಅವರ ಹಾಗೆ ವಿಗ್ರಹಾರಾಧಕರಾಗಬೇಡಿರಿ.
Kannada BSI Bible 2016
ಇಲ್ಲವೆ--ಜನರು ತಿನ್ನುವದಕ್ಕೂ ಕುಡಿಯುವದಕ್ಕೂ ಕೂತುಕೊಂಡರು; ಆಟವಾಡುವದಕ್ಕೆ ಎದ್ದರು ಎಂದು ಬರೆದಿರುವ ಪ್ರಕಾರ ನೀವೂ ಅವರಲ್ಲಿ ಕೆಲವರಂತೆ ವಿಗ್ರಹಾರಾಧಕರಾಗ ಬೇಡಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರಲ್ಲಿ ಕೆಲವರು ವಿಗ್ರಹಾರಾಧಕರಾಗಿದ್ದರು; ಜನರು ಉಣ್ಣುವದಕ್ಕೂ ಕುಡಿಯುವದಕ್ಕೂ ಕೂತುಕೊಂಡರು, ಕುಣಿದಾಡುವದಕ್ಕೆ ಎದ್ದರು ಎಂದು ಬರೆದದೆಯಲ್ಲಾ; ನೀವು ವಿಗ್ರಹಾರಾಧಕರಾಗಬೇಡಿರಿ.
Kannada Bible (KNCL) BSI 2016
ಅವರಲ್ಲಿ ಕೆಲವರು ವಿಗ್ರಹಾರಾಧಕರಾದಂತೆ ನಾವು ಆಗಬಾರದು. ಇವರನ್ನು ಕುರಿತೇ: “ತಿನ್ನಲೆಂದು ಕುಡಿಯಲೆಂದು ಕುಳಿತರು ಕುಣಿಯಲೆಂದು ಕಾಮವೆದ್ದು ನಿಂತರು ಈ ಜನರು” - ಎಂದು ಬರೆದಿದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಅವರಲ್ಲಿ ಕೆಲವರು ವಿಗ್ರಹಾರಾಧಕರಾಗಿ ಉಣ್ಣುವುದಕ್ಕೂ, ಕುಡಿಯುವುದಕ್ಕೂ ಕುಳಿತುಕೊಂಡರು, ಕುಣಿದಾಡುವುದಕ್ಕೆ ಎದ್ದರು,” ಎಂದು ಬರೆದಿರುವಂತೆ ನೀವೂ ವಿಗ್ರಹಾರಾಧಕರಾಗಬೇಡಿರಿ.