1 Corinthians 11:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದಕಾರಣವೇ, ಸ್ತ್ರೀಯು ತಾನು ಅಧಿಕಾರದ ಅಧೀನದಲ್ಲಿರುವುದನ್ನು ಸೂಚಿಸಲು ತನ್ನ ತಲೆಗೆ ಮುಸುಕು ಹಾಕಿಕೊಳ್ಳಬೇಕು. ದೇವದೂತರ ನಿಮಿತ್ತವಾಗಿಯೂ ಸ್ತ್ರೀ ತನ್ನ ತಲೆಗೆ ಮುಸುಕು ಹಾಕಿಕೊಳ್ಳಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರುವುದರಿಂದ ದೂತರ ನಿಮಿತ್ತವಾಗಿ ಸ್ತ್ರೀಯು ಪುರುಷನ ಅಧಿಕಾರವನ್ನು ಸೂಚಿಸುವ ಮುಸುಕನ್ನು ತಲೆಯ ಮೇಲೆ ಹಾಕಿಕೊಂಡಿರಬೇಕು.
Kannada BSI Bible 2016
ಈ ಕಾರಣದಿಂದ ದೂತರ ನಿಮಿತ್ತವಾಗಿ ಸ್ತ್ರೀಗೆ ತನ್ನ ಶಿರಸ್ಸಿನ ಮೇಲೆ ಅಧಿಕಾರವಿರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರುವದರಿಂದ ದೂತರ ನಿವಿುತ್ತವಾಗಿ ಸ್ತ್ರೀಯು ಪುರುಷನ ಅಧಿಕಾರ ಸೂಚಿಸುವ ಮುಸುಕನ್ನು ತಲೆಯ ಮೇಲೆ ಹಾಕಿಕೊಂಡಿರಬೇಕು.
Kannada Bible (KNCL) BSI 2016
ಹೀಗೆ ದೇವದೂತರ ಸಲುವಾಗಿಯಾದರೂ ಸ್ತ್ರೀಯು ಗೌರವ ಸೂಚಿಸಲು ಮುಸುಕನ್ನು ಹಾಕಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಕಾರಣದಿಂದಲೂ ದೇವದೂತರ ನಿಮಿತ್ತವಾಗಿಯೂ ಸ್ತ್ರೀಯ ತಲೆಯ ಮೇಲೆ ಅಧಿಕಾರದ ಮುಸುಕನ್ನು ಹಾಕಿರಬೇಕು.