1 Corinthians 11:15 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಉದ್ದನೆಯ ಕೂದಲನ್ನು ಹೊಂದಿರುವುದು ಸ್ತ್ರೀಗೆ ಗೌರವಯುತವಾಗಿದೆ. ಉದ್ದನೆಯ ಕೂದಲನ್ನು ಸ್ತ್ರೀಯ ತಲೆಗೆ ಮುಸುಕನ್ನಾಗಿ ಕೊಡಲಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸ್ತ್ರೀಯು ಉದ್ದ ಕೂದಲು ಬೆಳೆಸಿಕೊಂಡರೆ ಅದು ಅವಳಿಗೆ ಮುಸುಕಿಗೆ ಬದಲಾಗಿ ನೀಡಲಾಗಿದ್ದು ಅದು ಅವಳಿಗೆ ಗೌರವವಾಗಿದೆಯೆಂದೂ ಸ್ವಾಭಾವಿಕವಾಗಿ ನಿಮಗೆ ತಿಳಿಯುತ್ತದಲ್ಲವೋ?
Kannada BSI Bible 2016
ಆದರೆ ಸ್ತ್ರೀಯು ಕೂದಲು ಬೆಳೆಸಿಕೊಂಡರೆ ಅವಳಿಗೆ ಮುಸುಕಿಗೆ ಬದಲಾಗಿ ಕೊಡಲ್ಪಟ್ಟಿರುವದರಿಂದ ಅದು ಅವಳಿಗೆ ಗೌರವ ವಾಗಿದೆ;
Kannada BSI JV (ಕನ್ನಡ ಸತ್ಯವೇದವು J.V. (BSI))
ಸ್ತ್ರೀಯು ಬೆಳಸಿಕೊಂಡರೆ ಕೂದಲು ಅವಳಿಗೆ ಮುಸುಕಿಗೆ ಬದಲಾಗಿ ಕೊಡಲ್ಪಟ್ಟಿರುವದರಿಂದ ಅದು ಅವಳಿಗೆ ಗೌರವವಾಗಿದೆಯೆಂದೂ ನಿಮಗೆ ಸ್ವಭಾವ ಸಿದ್ಧವಾಗಿ ತಿಳಿಯುತ್ತದಲ್ಲವೋ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸ್ತ್ರೀಯು ಕೂದಲು ಬೆಳೆಸಿಕೊಂಡರೆ, ಅದು ಅವಳಿಗೆ ಮಹಿಮೆಯಾಗಿದೆಯೆಂದೂ ಪ್ರಕೃತಿಯೇ ಸ್ಪಷ್ಟಪಡಿಸುತ್ತದೆ ಅಲ್ಲವೇ? ಏಕೆಂದರೆ, ಅವಳಿಗೆ ಉದ್ದ ಕೂದಲು ಮುಸುಕಿನಂತೆ ಕೊಡಲಾಗಿದೆ.