1 Corinthians 11:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಏಕೆಂದರೆ, ನೀವು ಊಟ ಮಾಡುವಾಗ, ಇತರರಿಗೋಸ್ಕರ ಕಾಯದೆ ಪ್ರತಿಯೊಬ್ಬರು ತಮ್ಮಷ್ಟಕ್ಕೆ ತಾವೇ ಊಟ ಮಾಡುತ್ತಾರೆ. ಕೆಲವು ಜನರಲ್ಲಿ ಊಟಮಾಡಲು ಸಾಕಷ್ಟು ಆಹಾರ ಇರುವುದಿಲ್ಲ. ಇನ್ನು ಕೆಲವರಲ್ಲಿ ತಿಂದು, ಕುಡಿದು ಮತ್ತರಾಗುವಷ್ಟು ಆಹಾರವಿರುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಭೋಜನ ಮಾಡುವಲ್ಲಿ ಪ್ರತಿಯೊಬ್ಬನು ತಾನು ತಂದದ್ದನ್ನು ಮತ್ತೊಬ್ಬರಿಗಿಂತ ಮುಂದಾಗಿ ಊಟಮಾಡುತ್ತಾನೆ. ಹೀಗೆ ಒಬ್ಬನು ಹಸಿದಿರುತ್ತಾನೆ ಮತ್ತೊಬ್ಬನು ಕುಡಿದು ಮತ್ತನಾಗಿರುತ್ತಾನೆ.
Kannada BSI Bible 2016
ಭೋಜನವಾಗುವಲ್ಲಿ ಪ್ರತಿ ಯೊಬ್ಬನು ತನ್ನದನ್ನು ಮತ್ತೊಬ್ಬರಿಗಿಂತ ಮುಂದಾಗಿ ಊಟಮಾಡುತ್ತಾನೆ; ಹೀಗೆ ಒಬ್ಬನು ಹಸಿದಿರುತ್ತಾನೆ, ಮತ್ತೊಬ್ಬನು ಕುಡಿದು ಮತ್ತನಾಗಿರುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಭೋಜನವಾಗುವಲ್ಲಿ ಪ್ರತಿಯೊಬ್ಬನು ತಾನು ತಂದದ್ದನ್ನು ಮತ್ತೊಬ್ಬರಿಗಿಂತ ಮುಂದಾಗಿ ಊಟಮಾಡುತ್ತಾನೆ; ಹೀಗೆ ಒಬ್ಬನು ಹಸಿದಿರುತ್ತಾನೆ, ಮತ್ತೊಬ್ಬನು ಕುಡಿದು ಮತ್ತನಾಗಿರುತ್ತಾನೆ.
Kannada Bible (KNCL) BSI 2016
ಏಕೆಂದರೆ, ಭೋಜನ ಸಮಯದಲ್ಲಿ ಒಬ್ಬೊಬ್ಬನೂ ತಾನು ತಂದದ್ದನ್ನು ತಿನ್ನಲು ಇತರರಿಗಿಂತ ಮುಂಚಿತವಾಗಿಯೇ ಕುಳಿತುಕೊಳ್ಳುತ್ತಾನೆ. ಒಬ್ಬನು ಹಸಿದಿರುತ್ತಾನೆ; ಇನ್ನೊಬ್ಬನು ಕುಡಿದು ಮತ್ತನಾಗುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ, ಭೋಜನ ಮಾಡುವಾಗ, ಪ್ರತಿಯೊಬ್ಬನು ಇತರರಿಗಾಗಿ ಕಾಯದೇ, ತನ್ನ ಭೋಜನವನ್ನು ಮುಂಚಿತವಾಗಿ ಆರಂಭಿಸುತ್ತಾನೆ. ಒಬ್ಬನು ಹಸಿದಿರುತ್ತಾನೆ, ಮತ್ತೊಬ್ಬನು ಕುಡಿದಿರುತ್ತಾನೆ.