1 Corinthians 11:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ನಿಮ್ಮ ಸ್ವಂತ ಮನೆಗಳಲ್ಲಿ ತಿನ್ನಬಹುದು, ಕುಡಿಯಬಹುದು. ದೇವರ ಸಭೆಯು ಮುಖ್ಯವಾದದ್ದಲ್ಲವೆಂದು ನೀವು ಯೋಚಿಸುವಂತೆ ತೋರುತ್ತದೆ. ನೀವು ಬಡವರನ್ನು ನಾಚಿಕೆಗೆ ಗುರಿಮಾಡುತ್ತೀರಿ. ನಾನು ನಿಮಗೆ ಏನು ಹೇಳಲಿ? ನೀವು ಮಾಡುತ್ತಿರುವ ಈ ಕಾರ್ಯಕ್ಕೋಸ್ಕರ ನಾನು ನಿಮ್ಮನ್ನು ಹೊಗಳಬೇಕೇ? ನಾನು ನಿಮ್ಮನ್ನು ಹೊಗಳುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿಮಗೆ ತಿನ್ನುವುದಕ್ಕೂ, ಕುಡಿಯುವುದಕ್ಕೂ ಮನೆಗಳಿಲ್ಲವೋ? ಅಥವಾ ದೇವರ ಸಭೆಯನ್ನು ಅಸಡ್ಡೆಮಾಡಿ ಏನೂ ಇಲ್ಲದವರನ್ನು ಅವಮಾನಮಾಡುತ್ತೀರಾ? ನಾನು ನಿಮಗೇನು ಹೇಳಲಿ? ನಿಮ್ಮನ್ನು ಹೊಗಳಲೋ? ಈ ವಿಷಯದಲ್ಲಿ ಹೊಗಳುವುದಿಲ್ಲ.
Kannada BSI Bible 2016
ಏನು, ನೀವು ಉಣ್ಣುವದಕ್ಕೂ ಕುಡಿಯುವದಕ್ಕೂ ಮನೆಗಳಿಲ್ಲದೆ ಇದ್ದೀರಾ? ಅಥವಾ ದೇವರ ಸಭೆಯನ್ನು ಅಸಡ್ಡೆಮಾಡಿ ಏನೂ ಇಲ್ಲದವರನ್ನು ನಾಚಿಕೆಪಡಿಸುತ್ತೀರಾ? ನಾನು ನಿಮಗೇನು ಹೇಳಲಿ? ಈ ವಿಷಯದಲ್ಲಿ ನಾನು ನಿಮ್ಮನ್ನು ಹೊಗಳಲೋ? ಹೊಗಳುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಏನು, ಉಣ್ಣುವದಕ್ಕೂ ಕುಡಿಯುವದಕ್ಕೂ ಮನೆಗಳಿಲ್ಲದೆ ಇದ್ದೀರಾ? ಅಥವಾ ದೇವರ ಸಭೆಯನ್ನು ಅಸಡ್ಡೆಮಾಡಿ ಏನೂ ಇಲ್ಲದವರನ್ನು ನಾಚಿಕೆಪಡಿಸುತ್ತೀರಾ? ನಾನು ನಿಮಗೇನು ಹೇಳಲಿ? ನಿಮ್ಮನ್ನು ಹೊಗಳಲೋ? ಈ ವಿಷಯದಲ್ಲಿ ಹೊಗಳುವದಿಲ್ಲ.
Kannada Bible (KNCL) BSI 2016
ತಿನ್ನಲು, ಕುಡಿಯಲು ನಿಮಗೆ ಸ್ವಂತ ಮನೆಗಳಿಲ್ಲವೇ? ನಿರ್ಗತಿಕರನ್ನು ನಾಚಿಕೆಗೀಡುಮಾಡಿ, ದೇವರ ಸಭೆಯನ್ನು ಉಪೇಕ್ಷಿಸಬೇಕೆಂದಿರುವಿರೋ? ಇದರ ಬಗ್ಗೆ ನಿಮಗೆ ನಾನು ಏನು ಹೇಳಲೀ? ನಿಮ್ಮನ್ನು ಹೊಗಳುವುದೋ, ತೆಗಳುವುದೋ? ಖಂಡಿತವಾಗಿ ನಿಮ್ಮನ್ನು ಹೊಗಳಲಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಉಣ್ಣುವುದಕ್ಕೂ, ಕುಡಿಯುವುದಕ್ಕೂ ನಿಮಗೆ ಮನೆಗಳಿಲ್ಲವೇ? ಅಥವಾ ದೇವರ ಸಭೆಯನ್ನು ಹೀನೈಸಿ ಏನೂ ಇಲ್ಲದವರನ್ನು ನಾಚಿಕೆಪಡಿಸುತ್ತೀರಾ? ನಾನು ನಿಮಗೇನು ಹೇಳಲಿ? ಇದಕ್ಕಾಗಿ ನಾನು ನಿಮ್ಮನ್ನು ಹೊಗಳಬೇಕೆ? ಖಂಡಿತ ಇಲ್ಲ.