1 Corinthians 11:24 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅದಕ್ಕಾಗಿ ಸ್ತೋತ್ರ ಸಲ್ಲಿಸಿ, ಅದನ್ನು ಮುರಿದು, "ಇದು ನನ್ನ ದೇಹ; ಇದನ್ನು ನಿಮಗೋಸ್ಕರ ಕೊಡಲಾಗಿದೆ. ನನ್ನನ್ನು ನೆನಸಿಕೊಳ್ಳುವುದಕ್ಕಾಗಿ ಹೀಗೆ ಮಾಡಿರಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಇದು ನಿಮಗೋಸ್ಕರವಾಗಿರುವ ನನ್ನ ದೇಹ, ನನ್ನನ್ನು ನೆನಪಿಸಿಕೊಳ್ಳುವುದಕ್ಕೋಸ್ಕರ ಹೀಗೆ ಮಾಡಿರಿ” ಅಂದನು.
Kannada BSI Bible 2016
ಸ್ತ್ರೋತ್ರಮಾಡಿ ಅದನ್ನು ಮುರಿದು--ತೆಗೆದುಕೊಳ್ಳಿರಿ, ತಿನ್ನಿರಿ; ಇದು ನಿಮಗೋಸ್ಕರ ಮುರಿಯಲ್ಪಟ್ಟ ನನ್ನ ದೇಹ; ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಇದನ್ನು ಮಾಡಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದು ನಿಮಗೋಸ್ಕರವಾಗಿರುವ ನನ್ನ ದೇಹ; ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಹೀಗೆ ಮಾಡಿರಿ ಅಂದನು.
Kannada Bible (KNCL) BSI 2016
ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸಿ ಅದನ್ನು ಮುರಿದು, “ಇದು ನಿಮಗಾಗಿ ಒಪ್ಪಿಸಲಾಗುವ ನನ್ನ ಶರೀರ, ಇದನ್ನು ನನ್ನ ಸ್ಮರಣೆಗಾಗಿ ಮಾಡಿ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸ್ತೋತ್ರಮಾಡಿ ಮುರಿದು, “ಇದು ನಿಮಗೋಸ್ಕರವಾಗಿರುವ ನನ್ನ ದೇಹ, ನನ್ನ ನೆನಪಿಗಾಗಿ ನೀವು ಇದನ್ನು ಮಾಡಿರಿ,” ಎಂದರು.