1 Corinthians 11:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದೇ ರೀತಿಯಲ್ಲಿ ಅವರು ಊಟಮಾಡಿದ ಮೇಲೆ ಯೇಸು ದ್ರಾಕ್ಷಾರಸದ ಪಾತ್ರೆಯನ್ನು ತೆಗೆದುಕೊಂಡು, "ದೇವರು ತನ್ನ ಜನರೊಂದಿಗೆ ಮಾಡಿಕೊಂಡ ಹೊಸ ಒಡಂಬಡಿಕೆಯನ್ನು ಈ ದ್ರಾಕ್ಷಾರಸ ಸೂಚಿಸುತ್ತದೆ. ಈ ಹೊಸ ಒಡಂಬಡಿಕೆ ನನ್ನ ರಕ್ತದಿಂದ ಆರಂಭವಾಗುತ್ತದೆ. ನೀವು ಇದನ್ನು ಕುಡಿಯುವಾಗಲೆಲ್ಲಾ ನನ್ನನ್ನು ನೆನಸಿಕೊಳ್ಳವವರಾಗಿದ್ದೀರಿ” ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಊಟವಾದ ಮೇಲೆ ಆತನು ಅದೇ ರೀತಿಯಲ್ಲಿ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾನಪಾತ್ರೆಯು ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ. ನೀವು ಇದರಲ್ಲಿ ಪಾನಮಾಡುವಾಗೆಲೆಲ್ಲಾ ನನ್ನನ್ನು ನೆನಪುಮಾಡಿಕೊಳ್ಳುವುದಕ್ಕೋಸ್ಕರ ಇದನ್ನು ಪಾನಮಾಡಿರಿ” ಅಂದನು.
Kannada BSI Bible 2016
ಅದೇ ರೀತಿಯಾಗಿ ಊಟವಾದ ಮೇಲೆ ಆತನು ಪಾತ್ರೆಯನ್ನು ತೆಗೆದುಕೊಂಡು--ಈ ಪಾತ್ರೆಯು ನನ್ನ ರಕ್ತದಲ್ಲಿರುವ ಹೊಸಒಡಂಬಡಿಕೆ ಯಾಗಿದೆ; ನೀವು ಇದರಲ್ಲಿ ಪಾನಮಾಡುವಾಗೆಲ್ಲಾ ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಇದನ್ನು ಮಾಡಿರಿ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಊಟವಾದ ಮೇಲೆ ಆತನು ಅದೇ ರೀತಿಯಾಗಿ ಪಾತ್ರೆಯನ್ನು ತೆಗೆದುಕೊಂಡು - ಈ ಪಾತ್ರೆಯು ನನ್ನ ರಕ್ತದಿಂದ ಸ್ಥಾಪಿತವಾಗುವ ಹೊಸ ಒಡಂಬಡಿಕೆಯನ್ನು ಸೂಚಿಸುತ್ತದೆ; ನೀವು ಇದರಲ್ಲಿ ಪಾನಮಾಡುವಾಗೆಲ್ಲಾ ನನ್ನನ್ನು ನೆನಸಿಕೊಳ್ಳುವದಕ್ಕೋಸ್ಕರ ಪಾನಮಾಡಿರಿ ಅಂದನು.
Kannada Bible (KNCL) BSI 2016
ಅಂತೆಯೇ ಭೋಜನದ ಕೊನೆಯಲ್ಲಿ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆ ನನ್ನ ರಕ್ತದಿಂದ ಮುದ್ರಿತವಾದ ಹೊಸ ಒಡಂಬಡಿಕೆ; ಇದನ್ನು ನೀವು ಪಾನಮಾಡುವಾಗಲೆಲ್ಲಾ ನನ್ನ ಸ್ಮರಣೆಗಾಗಿ ಮಾಡಿರಿ,” ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅದೇ ಪ್ರಕಾರ, ಭೋಜನವಾದ ಮೇಲೆ ಪಾನಪಾತ್ರೆಯನ್ನು ತೆಗೆದುಕೊಂಡು, “ಈ ಪಾತ್ರೆಯು ನಿಮಗೋಸ್ಕರ ಸುರಿಸಲಾಗುವ, ನನ್ನ ರಕ್ತದಿಂದಾದ ಹೊಸ ಒಡಂಬಡಿಕೆಯಾಗಿದೆ. ನೀವು ಇದರಲ್ಲಿ ಪಾನಮಾಡುವಾಗೆಲ್ಲಾ ನನ್ನನ್ನು ಜ್ಞಾಪಿಸಿಕೊಳ್ಳುವದಕ್ಕೋಸ್ಕರ ಪಾನಮಾಡಿರಿ,” ಎಂದರು.