1 Corinthians 11:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹೀಗಿರಲಾಗಿ ಒಬ್ಬನು ಪ್ರಭುವಿನ ರೊಟ್ಟಿಯನ್ನು ತಿನ್ನುವಾಗ, ಪಾತ್ರೆಯಲ್ಲಿ ಕುಡಿಯುವಾಗ ಇವುಗಳ ನಿಜವಾದ ಅರ್ಥವನ್ನು ಕಾರ್ಯಗಳ ಮೂಲಕ ತೋರ್ಪಡಿಸಬೇಕು, ಇಲ್ಲವಾದರೆ ಅವನು ಪ್ರಭುವಿನ ದೇಹಕ್ಕೂ ರಕ್ತಕ್ಕೂ ದೋಷಿಯಾಗುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರುವುದರಿಂದ ಯಾವನಾದರೂ ಅಯೋಗ್ಯವಾಗಿ ಕರ್ತನ ರೊಟ್ಟಿಯನ್ನು ತಿಂದರೆ ಇಲ್ಲವೆ ಆತನ ಪಾನಪಾತ್ರೆಯಲ್ಲಿ ಪಾನ ಮಾಡಿದರೆ ಅವನು ಕರ್ತನ ದೇಹಕ್ಕೂ ಮತ್ತು ಕರ್ತನ ರಕ್ತಕ್ಕೂ ಸಂಬಂಧಿಸಿದಂತೆ ದ್ರೋಹಮಾಡಿದವನಾಗಿರುವನು.
Kannada BSI Bible 2016
ಹೀಗಿರುವದರಿಂದ ಯಾವನಾದರೂ ಅಯೋಗ್ಯ ವಾಗಿ ಈ ರೊಟ್ಟಿಯನ್ನು ತಿಂದು ಕರ್ತನ ಪಾತ್ರೆಯಲ್ಲಿ ಪಾನಮಾಡಿದರೆ ಅವನು ಕರ್ತನ ದೇಹಕ್ಕೂ ರಕ್ತಕ್ಕೂ ಅಪರಾಧ ಮಾಡಿದವನಾಗಿರುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರುವದರಿಂದ ಯಾವನಾದರೂ ಅಯೋಗ್ಯವಾಗಿ ಕರ್ತನ ರೊಟ್ಟಿಯನ್ನು ತಿಂದರೆ ಇಲ್ಲವೆ ಆತನ ಪಾತ್ರೆಯಲ್ಲಿ ಪಾನಮಾಡಿದರೆ ಅವನು ಕರ್ತನ ದೇಹಕ್ಕೂ ರಕ್ತಕ್ಕೂ ದ್ರೋಹಮಾಡಿದವನಾಗಿರುವನು.
Kannada Bible (KNCL) BSI 2016
ಯಾರಾದರೂ ಅಯೋಗ್ಯವಾಗಿ ಈ ರೊಟ್ಟಿಯನ್ನು ಭುಜಿಸಿದರೆ, ಅಥವಾ ಪ್ರಭುವಿನ ಪಾತ್ರೆಯಿಂದ ಪಾನಮಾಡಿದರೆ ಅವನು ಪ್ರಭುವಿನ ಶರೀರಕ್ಕೂ ರಕ್ತಕ್ಕೂ ದ್ರೋಹವೆಸಗುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗಿರುವುದರಿಂದ, ಯಾರಾದರೂ ಅಯೋಗ್ಯವಾಗಿ ಕರ್ತದೇವರ ರೊಟ್ಟಿಯನ್ನು ತಿಂದರೆ, ಇಲ್ಲವೆ ಅವರ ಪಾತ್ರೆಯಲ್ಲಿ ಪಾನ ಮಾಡಿದರೆ, ಅಂಥವರು ಕರ್ತದೇವರ ದೇಹಕ್ಕೂ, ರಕ್ತಕ್ಕೂ ದ್ರೋಹ ಮಾಡಿದವರಾಗಿರುವರು.