1 Corinthians 11:29 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾವನಾದರೂ ಪ್ರಭುವಿನ ದೇಹವೆಂದು ಗುರುತಿಸದೆ ರೊಟ್ಟಿಯನ್ನು ತಿಂದರೆ ಮತ್ತು ದ್ರಾಕ್ಷಾರಸವನ್ನು ಕುಡಿದರೆ ಅವನು ತಿಂದದ್ದಕ್ಕೂ ಕುಡಿದದ್ದಕ್ಕೂ ದೋಷಿಯೆಂಬ ತೀರ್ಪಿಗೆ ಒಳಗಾಗುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಕೆಂದರೆ ಕರ್ತನ ದೇಹವೆಂದು ವಿವೇಚಿಸದೇ ತಿಂದು ಕುಡಿಯುವವನು ಹಾಗೆ ತಿಂದು ಕುಡಿಯುವುದರಿಂದ ನ್ಯಾಯತೀರ್ಪಿಗೊಳಗಾಗುವನು.
Kannada BSI Bible 2016
ಯಾಕಂದರೆ ಕರ್ತನ ದೇಹವೆಂದು ವಿವೇಚಿಸದೆ ಅಯೋಗ್ಯವಾಗಿ ತಿಂದು ಕುಡಿಯುವವನು ಹಾಗೆ ತಿಂದು ಕುಡಿಯುವದರಿಂದ ನ್ಯಾಯತೀರ್ಪಿಗೊಳ ಗಾಗುವನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕಂದರೆ ಕರ್ತನ ದೇಹವೆಂದು ವಿವೇಚಿಸದೆ ತಿಂದು ಕುಡಿಯುವವನು ಹಾಗೆ ತಿಂದು ಕುಡಿಯುವದರಿಂದ ನ್ಯಾಯತೀರ್ಪಿಗೊಳಗಾಗುವನು.
Kannada Bible (KNCL) BSI 2016
ಏಕೆಂದರೆ, ಅದು ಪ್ರಭುವಿನ ಶರೀರವೆಂದು ಪರಿಗ್ರಹಿಸದೆ, ಭುಜಿಸಿ ಪಾನಮಾಡುವಾತನು ನ್ಯಾಯತೀರ್ಪನ್ನು ತನ್ನ ಮೇಲೆ ಬರಮಾಡಿಕೊಳ್ಳುವುದಕ್ಕಾಗಿಯೇ ತಿನ್ನುತ್ತಾನೆ, ಕುಡಿಯುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ, ಯಾರಾದರು ಕ್ರಿಸ್ತನ ದೇಹವೆಂದು ವಿವೇಚಿಸದೆ ತಿಂದು ಕುಡಿದರೆ, ಹಾಗೆ ತಿಂದು ಕುಡಿಯುವುದರಿಂದ ನ್ಯಾಯತೀರ್ಪಿಗೊಳಗಾಗುವರು.