1 Corinthians 11:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ನೀವು ಈ ವಿಷಯವನ್ನೂ ಅರ್ಥಮಾಡಿಕೊಳ್ಳಬೇಕೆಂಬುದು ನನ್ನ ಆಸೆ. ಪ್ರತಿಯೊಬ್ಬ ಪುರುಷನಿಗೂ ಕ್ರಿಸ್ತನು ಶಿರಸ್ಸಾಗಿದ್ದಾನೆ; ಸ್ತ್ರೀಗೆ ಪುರುಷನು ಶಿರಸ್ಸಾಗಿದ್ದಾನೆ; ಕ್ರಿಸ್ತನಿಗೆ ದೇವರು ಶಿರಸ್ಸಾಗಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೂ ನೀವು ಒಂದು ಸಂಗತಿಯನ್ನು ತಿಳಿದಿರಬೇಕೆಂಬುದು ನನ್ನ ಇಷ್ಟ. ಅದೇನೆಂದರೆ ಪ್ರತಿ ಪುರುಷನಿಗೂ ಕ್ರಿಸ್ತನು ತಲೆಯಾಗಿದ್ದಾನೆ. ಸ್ತ್ರೀಗೆ ಪುರುಷನು ತಲೆಯಾಗಿದ್ದಾನೆ. ಕ್ರಿಸ್ತನಿಗೆ ದೇವರು ತಲೆಯಾಗಿದ್ದಾನೆ.
Kannada BSI Bible 2016
ಕಟ್ಟಳೆಗಳನ್ನು ಅನುಸರಿಸಿ ನಡೆಯುತ್ತೀರೆಂದು ನಿಮ್ಮನ್ನು ಹೊಗಳುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೂ ಒಂದು ಸಂಗತಿಯನ್ನು ನೀವು ತಿಳಿಯಬೇಕೆಂದು ನನ್ನ ಇಷ್ಟ; ಅದೇನಂದರೆ ಪ್ರತಿ ಪುರುಷನಿಗೂ ಕ್ರಿಸ್ತನು ತಲೆ, ಸ್ತ್ರೀಗೆ ಪುರುಷನು ತಲೆ, ಕ್ರಿಸ್ತನಿಗೆ ದೇವರು ತಲೆ ಆಗಿದ್ದಾನೆ.
Kannada Bible (KNCL) BSI 2016
ಒಂದು ವಿಷಯ ನಿಮಗೆ ತಿಳಿದಿರಲಿ. ಪ್ರತಿಯೊಬ್ಬ ವ್ಯಕ್ತಿಗೂ ಕ್ರಿಸ್ತಯೇಸುವೇ ಶಿರಸ್ಸು. ಪ್ರತಿಯೊಬ್ಬ ಸ್ತ್ರೀಗೂ ಪುರುಷನೇ ಶಿರಸ್ಸು. ಕ್ರಿಸ್ತೇಸುವಿಗೆ ದೇವರೇ ಶಿರಸ್ಸು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪ್ರತಿ ಪುರುಷನಿಗೂ ಕ್ರಿಸ್ತನು ಶಿರಸ್ಸು, ಸ್ತ್ರೀಗೆ ಪುರುಷನು ಶಿರಸ್ಸು ಮತ್ತು ಕ್ರಿಸ್ತನಿಗೆ ದೇವರು ಶಿರಸ್ಸಾಗಿದ್ದಾರೆ, ಎಂಬುದನ್ನು ನೀವು ತಿಳಿಯಬೇಕೆಂಬುದು ನನ್ನ ಅಪೇಕ್ಷೆ.