1 Corinthians 11:32 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಪ್ರಭುವು ನಮಗೆ ತೀರ್ಪು ಮಾಡುವಾಗ, ನಮಗೆ ಸರಿಯಾದ ಮಾರ್ಗವನ್ನು ತೋರಿಸುವುದಕ್ಕಾಗಿಯೂ ಈ ಲೋಕದ ಇತರ ಜನರೊಂದಿಗೆ ನಮಗೆ ಅಪರಾಧಿಗಳೆಂಬ ತೀರ್ಪಾಗದಂತೆಯೂ ಆತನು ನಮ್ಮನ್ನು ಶಿಕ್ಷಿಸುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೆ ನಾವು ಕರ್ತನಿಂದ ನ್ಯಾಯವಿಚಾರಣೆಗೆ ಒಳಗಾಗಿರಲಾಗಿ ಆತನು, ನಮಗೆ ಲೋಕದವರ ಸಂಗಡ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ನಮ್ಮನ್ನು ದಂಡನೆಗೆ ಗುರಿಪಡಿಸುತ್ತಾನೆ.
Kannada BSI Bible 2016
ಆದರೆ ನಾವು ನಮ್ಮನ್ನು ವಿಚಾರಿಸಿ ಕೊಂಡಾಗ ಲೋಕದವರ ಸಂಗಡ ನಮಗೆ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ಕರ್ತನು ನಮ್ಮನ್ನು ಶಿಕ್ಷಿಸುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೆ ನಾವು ಕರ್ತನ ನ್ಯಾಯವಿಚಾರಣೆಗೆ ಒಳಗಾಗಿರಲಾಗಿ ಆತನು - ಇವರಿಗೆ ಲೋಕದವರ ಸಂಗಡ ಅಪರಾಧಿಗಳೆಂಬ ನಿರ್ಣಯವಾಗಬಾರದೆಂದು ನಮ್ಮನ್ನು ಶಿಕ್ಷಿಸುತ್ತಾನೆ. ಆದಕಾರಣ ನನ್ನ ಸಹೋದರರೇ,
Kannada Bible (KNCL) BSI 2016
ಹಾಗೇನಾದರೂ ಪ್ರಭುವಿನ ವಿಚಾರಣೆಗೆ ನಾವು ಒಳಪಟ್ಟರೆ ಅವರು ನಮ್ಮನ್ನು ದಂಡಿಸಿ ತಿದ್ದುತ್ತಾರೆ. ಪ್ರಪಂಚದೊಂದಿಗೆ ನಾವು ತಪ್ಪಿತಸ್ಥರಾಗದಂತೆ ಮಾಡುತ್ತಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾವು ಲೋಕದವರ ಸಂಗಡ ದಂಡನೆಗೆ ಗುರಿಯಾಗಬಾರದೆಂದು, ದೇವರು ನಮ್ಮನ್ನು ಈಗ ಈ ರೀತಿಯಾಗಿ ಶಿಸ್ತಿನ ನ್ಯಾಯವಿಚಾರಣೆಗೆ ಒಳಪಡಿಸುತ್ತಾರೆ.