1 Corinthians 11:34 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಬ್ಬ ವ್ಯಕ್ತಿಯು ಹಸಿವೆಗೊಂಡಿದ್ದರೆ, ಅವನು ಮನೆಯಲ್ಲಿ ಊಟಮಾಡಲಿ. ನೀವು ಹೀಗೆ ಮಾಡಿದರೆ, ನಿಮ್ಮ ಸಭಾಕೂಟವು ನಿಮ್ಮ ಮೇಲೆ ನ್ಯಾಯತೀರ್ಪನ್ನು ಬರಮಾಡುವುದಿಲ್ಲ. ಉಳಿದ ವಿಷಯಗಳ ಬಗ್ಗೆ ನೀವು ಏನು ಮಾಡಬೇಕೆಂಬುದನ್ನು ನಾನು ನಿಮ್ಮಲ್ಲಿಗೆ ಬಂದಾಗ ತಿಳಿಸಿಕೊಡುತ್ತೇನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಬ್ಬನು ಹಸಿದರೆ ಅವನು ಮನೆಯಲ್ಲೇ ಊಟಮಾಡಲಿ ನೀವು ಸೇರಿಬಂದದ್ದು ನ್ಯಾಯ ತೀರ್ಪಿಗೊಳಗಾಗುವುದಕ್ಕೆ ಕಾರಣವಾಗಬಾರದು. ಇನ್ನುಳಿದಿರುವ ಸಂಗತಿಗಳನ್ನು ನಾನು ಬಂದ ನಂತರ ಆದೇಶಿಸುತ್ತೇನೆ.
Kannada BSI Bible 2016
ಒಬ್ಬನು ಹಸಿದರೆ ಅವನು ಮನೆಯಲ್ಲೇ ಊಟ ಮಾಡಲಿ; ನೀವು ಕೂಡಿಬಂದದ್ದು ನ್ಯಾಯತೀರ್ಪಿಗೊಳಗಾಗು ವದಕ್ಕೆ ಕಾರಣವಾಗಬಾರದು. ಮಿಕ್ಕಾದ ಸಂಗತಿಗಳನ್ನು ನಾನು ಬಂದಾಗ ಕ್ರಮಪಡಿಸುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಬ್ಬನು ಹಸಿದರೆ ಅವನು ಮನೆಯಲ್ಲೇ ಊಟಮಾಡಲಿ; ನೀವು ಕೂಡಿ ಬಂದದ್ದು ನ್ಯಾಯತೀರ್ಪಿಗೊಳಗಾಗುವದಕ್ಕೆ ಕಾರಣವಾಗಬಾರದು. ವಿುಕ್ಕಾದ ಸಂಗತಿಗಳನ್ನು ನಾನು ಬಂದಾಗ ಕ್ರಮಪಡಿಸುತ್ತೇನೆ.
Kannada Bible (KNCL) BSI 2016
ನೀವು ಹಸಿವು ನೀಗಿಸಿಕೊಳ್ಳುವುದಕ್ಕಾಗಿ ಸಭೆಗೆ ಬರುವುದಾದರೆ ಮನೆಯಲ್ಲೇ ಊಟಮಾಡಿ. ಆಗ ಸಭೆಸೇರಿ ನೀವು ನ್ಯಾಯವಿಚಾರಣೆಗೆ ಗುರಿಯಾಗುವುದಿಲ್ಲ. ಇನ್ನುಳಿದ ವಿಷಯಗಳನ್ನು ನಾನು ಬಂದು ಇತ್ಯರ್ಥ ಮಾಡುತ್ತೇನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ಒಟ್ಟಾಗಿ ಕೂಟಕ್ಕೆ ಸೇರಿಬರುವಾಗ, ನ್ಯಾಯತೀರ್ಪಿಗೆ ಒಳಗಾದಂತೆ, ಹಸಿದವರು ಮನೆಯಲ್ಲೇ ಊಟಮಾಡಲಿ. ಇನ್ನುಳಿದ ವಿಷಯಗಳನ್ನು ನಾನು ಬಂದಾಗ ಕ್ರಮಪಡಿಸುತ್ತೇನೆ.