1 Corinthians 11:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಪುರುಷನು ಪ್ರವಾದಿಸುವಾಗ ಅಥವಾ ಪ್ರಾರ್ಥಿಸುವಾಗ ತನ್ನ ತಲೆಯ ಮೇಲೆ ಮುಸುಕು ಹಾಕಿಕೊಂಡರೆ ಅದು ಅವನ ಶಿರಸ್ಸಾದ ಕ್ರಿಸ್ತನಿಗೆ ಅಪಮಾನಕರವಾಗಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಲೆಯನ್ನು ಮುಚ್ಚಿಕೊಂಡು ಪ್ರಾರ್ಥನೆಯನ್ನಾಗಲಿ, ಪ್ರವಾದನೆಯನ್ನಾಗಲಿ ಮಾಡುವ ಪುರುಷನು ತನ್ನ ತಲೆಯನ್ನು ಅವಮಾನಪಡಿಸುತ್ತಾನೆ.
Kannada BSI Bible 2016
ಆದರೂ ಪ್ರತಿ ಪುರುಷನಿಗೂ ಕ್ರಿಸ್ತನು ತಲೆ, ಸ್ತ್ರೀಗೆ ಪುರುಷನು ತಲೆ, ಕ್ರಿಸ್ತನಿಗೆ ದೇವರು ತಲೆಯಾಗಿದ್ದಾನೆ ಎಂದು ನೀವು ತಿಳಿಯಬೇಕೆಂದು ನಾನು ಅಪೇಕ್ಷಿಸುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ತಲೆಯನ್ನು ಮುಚ್ಚಿಕೊಂಡು ಪ್ರಾರ್ಥನೆಯನ್ನಾಗಲಿ ಪ್ರವಾದನೆಯನ್ನಾಗಲಿ ಮಾಡುವ ಪುರುಷನು ತನ್ನ ತಲೆಯನ್ನು ಅವಮಾನಪಡಿಸುತ್ತಾನೆ.
Kannada Bible (KNCL) BSI 2016
ಪುರುಷನು ತಲೆಯ ಮೇಲೆ ಮುಸುಕು ಹಾಕಿಕೊಂಡು ಪ್ರಾರ್ಥಿಸುವುದಾದರೆ ಅಥವಾ ದೇವರ ವಾಕ್ಯವನ್ನು ಪ್ರವಚಿಸುವುದಾದರೆ ತನ್ನ ಶಿರಸ್ಸಾದ ಕ್ರಿಸ್ತಯೇಸುವಿಗೆ ಅವಮಾನ ತರುತ್ತಾನೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತನ್ನ ತಲೆಯನ್ನು ಮುಚ್ಚಿಕೊಂಡು ಪ್ರಾರ್ಥನೆ ಮಾಡುವ ಇಲ್ಲವೆ, ಪ್ರವಾದನೆ ಹೇಳುವ ಪ್ರತಿ ಪುರುಷನೂ ತನ್ನ ತಲೆಯನ್ನು ಅವಮಾನಪಡಿಸುತ್ತಾನೆ.