1 Corinthians 11:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ಸ್ತ್ರೀಯು ಪ್ರಾರ್ಥಿಸುವಾಗ ಅಥವಾ ಪ್ರವಾದಿಸುವಾಗ ತನ್ನ ತಲೆಗೆ ಮುಸುಕನ್ನು ಹಾಕಿಕೊಂಡಿರಬೇಕು. ಆಕೆಯು ತನ್ನ ತಲೆಗೆ ಮುಸುಕು ಹಾಕಿಲ್ಲದಿದ್ದರೆ, ಅದು ಆಕೆಯ ಶಿರಸ್ಸಾದ ಪುರುಷನಿಗೆ ಅಪಮಾನಕರವಾಗಿದೆ. ಅವಳಿಗೂ ತಲೆಯನ್ನು ಬೋಳಿಸಿಕೊಂಡಿರುವ ಸ್ತ್ರೀಗೂ ಯಾವ ವ್ಯತ್ಯಾಸವಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತಲೆಯ ಮೇಲೆ ಮುಸುಕು ಹಾಕಿಕೊಳ್ಳದೆ ಪ್ರಾರ್ಥನೆಯನ್ನಾಗಲಿ ಪ್ರವಾದನೆಯನ್ನಾಗಲಿ ಮಾಡುವ ಸ್ತ್ರೀಯು ತನ್ನ ತಲೆಯನ್ನು ಅವಮಾನಪಡಿಸುತ್ತಾಳೆ. ಸ್ತ್ರೀಯು ಮುಸುಕಿಲ್ಲದೆ ಇರುವುದೂ ತಲೆಬೋಳಿಸಿಕೊಂಡಿರುವುದೂ ಒಂದೇ.
Kannada BSI Bible 2016
ತಲೆಯನ್ನು ಮುಚ್ಚಿಕೊಂಡು ಪ್ರಾರ್ಥನೆಯನ್ನಾಗಲಿ ಪ್ರವಾದನೆಯನ್ನಾಗಲಿ ಮಾಡುವ ಪ್ರತಿಯೊಬ್ಬ ಪುರುಷನು ತನ್ನ ತಲೆಯನ್ನು ಅವಮಾನಪಡಿಸುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ತಲೆಯ ಮೇಲೆ ಮುಸುಕುಹಾಕಿಕೊಳ್ಳದೆ ಪ್ರಾರ್ಥನೆಯನ್ನಾಗಲಿ ಪ್ರವಾದನೆಯನ್ನಾಗಲಿ ಮಾಡುವ ಸ್ತ್ರೀಯು ತನ್ನ ತಲೆಯನ್ನು ಅವಮಾನಪಡಿಸುತ್ತಾಳೆ. ಸ್ತ್ರೀಯು ಮುಸುಕಿಲ್ಲದಿರುವದೂ ತಲೆಬೋಳಿಸಿಕೊಂಡಿರುವದೂ ಒಂದೇ.
Kannada Bible (KNCL) BSI 2016
ಸ್ತ್ರೀಯು ತಲೆಯ ಮೇಲೆ ಮುಸುಕು ಹಾಕದೆ ಪ್ರಾರ್ಥಿಸುವುದಾದರೆ ಅಥವಾ ದೇವರ ವಾಕ್ಯವನ್ನು ಪ್ರವಚಿಸುವುದಾದರೆ ತನ್ನ ಶಿರಸ್ಸಾದ ಪತಿಗೆ ಅವಮಾನ ತರುತ್ತಾಳೆ. ಮುಸುಕು ಹಾಕದ ಸ್ತ್ರೀ ತಲೆಯನ್ನು ಮುಂಡನ ಮಾಡಿಸಿಕೊಂಡಂತೆಯೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ತಲೆಯ ಮೇಲೆ ಮುಸುಕು ಹಾಕಿಕೊಳ್ಳದೆ ಪ್ರಾರ್ಥನೆ ಮಾಡುವ ಇಲ್ಲವೆ ಪ್ರವಾದನೆ ಹೇಳುವ ಪ್ರತಿ ಸ್ತ್ರೀಯು ತನ್ನ ತಲೆಯನ್ನು ಅವಮಾನ ಪಡಿಸುತ್ತಾಳೆ. ಹೀಗೆ ಮಾಡುವ ಸ್ತ್ರೀಯು ತನ್ನ ತಲೆ ಬೋಳಿಸಿಕೊಳ್ಳುವುದಕ್ಕೆ ಸಮಾನವಾಗಿದೆ.