1 Corinthians 11:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸ್ತ್ರೀಯು ತನ್ನ ತಲೆಗೆ ಮುಸುಕು ಹಾಕಿಕೊಳ್ಳದಿದ್ದರೆ, ಆಕೆಯು ತನ್ನ ತಲೆಯನ್ನು ಬೋಳಿಸಿಕೊಳ್ಳಲಿ. ತಲೆಕೂದಲನ್ನು ಕತ್ತರಿಸಿಕೊಳ್ಳುವುದಾಗಲಿ ತಲೆಯನ್ನು ಬೋಳಿಸಿಕೊಳ್ಳುವುದಾಗಲಿ ಸ್ತ್ರೀಗೆ ಅಪಮಾನಕರವಾಗಿದೆ. ಆದ್ದರಿಂದ ಆಕೆ ತನ್ನ ತಲೆಗೆ ಮುಸುಕು ಹಾಕಿಕೊಳ್ಳಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸ್ತ್ರೀಯು ಮುಸುಕು ಹಾಕಿಕೊಳ್ಳದಿದ್ದರೆ ಆಕೆಯು ಕೂದಲನ್ನು ತೆಗೆಯಿಸಿಬಿಡಬೇಕಷ್ಟೆ. ಆದರೆ ಕೂದಲನ್ನು ಕತ್ತರಿಸಿಕೊಳ್ಳುವುದಾಗಲಿ ತಲೆಬೋಳಿಸಿಕೊಳ್ಳುವುದಾಗಲಿ ಸ್ತ್ರೀಗೆ ಅವಮಾನಕರವಾಗಿದ್ದರೆ ಆಕೆಯು ಮುಸುಕನ್ನು ಹಾಕಿಕೊಳ್ಳಲಿ.
Kannada BSI Bible 2016
ಆದರೆ ತಲೆಯಮೇಲೆ ಮುಸುಕು ಹಾಕಿಕೊಳ್ಳದೆ ಪ್ರಾರ್ಥನೆಯನ್ನಾಗಲಿ ಪ್ರವಾದನೆಯನ್ನಾಗಲಿ ಮಾಡುವ ಪ್ರತಿಯೊಬ್ಬ ಸ್ತ್ರೀಯು ತನ್ನ ತಲೆಯನ್ನು ಅವಮಾನಪಡಿಸುತ್ತಾಳೆ. ಯಾಕಂದರೆ ಸ್ತ್ರೀಯು ಮುಸುಕಿಲ್ಲದಿರುವದೂ ತಲೆಬೋಳಿಸಿ ಕೊಂಡಿರುವದೂ ಒಂದೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಸ್ತ್ರೀಯು ಮುಸುಕುಹಾಕಿಕೊಳ್ಳದಿದ್ದರೆ ಆಕೆಯು ಕೂದಲನ್ನು ತೆಗಿಸಿಬಿಡಬೇಕಷ್ಟೆ. ಆದರೆ ಕೂದಲನ್ನು ಕತ್ತರಿಸಿಕೊಳ್ಳುವದಾಗಲಿ ತಲೆಬೋಳಿಸಿಕೊಳ್ಳುವದಾಗಲಿ ಸ್ತ್ರೀಗೆ ಅವಮಾನಕರವಾಗಿದ್ದರೆ ಆಕೆಯು ಮುಸುಕನ್ನು ಹಾಕಿಕೊಳ್ಳಲಿ.
Kannada Bible (KNCL) BSI 2016
ಹಾಗೆ ಮುಸುಕು ಹಾಕದ ಸ್ತ್ರೀ ತನ್ನ ತಲೆಗೂದಲನ್ನು ತೆಗೆದುಬಿಡಲಿ. ಸ್ತ್ರೀಗೆ ತಲೆಗೂದಲನ್ನು ಕತ್ತರಿಸುವುದಾಗಲಿ, ಬೋಳಿಸುವುದಾಗಲಿ ಲಜ್ಜಾಸ್ಪದವಾಗಿದ್ದರೆ, ಆಕೆ ತಲೆಗೆ ಮುಸುಕು ಹಾಕಿಕೊಳ್ಳಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸ್ತ್ರೀಯು ಮುಸುಕು ಹಾಕಿಕೊಳ್ಳದೆ ಇದ್ದರೆ, ಆಕೆಯು ಕೂದಲನ್ನು ಕತ್ತರಿಸಿಕೊಳ್ಳಲಿ. ಕೂದಲನ್ನು ಕತ್ತರಿಸಿಕೊಳ್ಳುವುದಾಗಲಿ, ತಲೆ ಬೋಳಿಸಿಕೊಳ್ಳವುದಾಗಲಿ ಸ್ತ್ರೀಗೆ ಅವಮಾನಕರವಾಗಿದ್ದರೆ, ಆಕೆಯು ಮುಸುಕನ್ನು ಹಾಕಿಕೊಳ್ಳಬೇಕು.