1 Corinthians 12:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮತ್ತೊಬ್ಬನಿಗೆ ಅದ್ಭುತಕಾರ್ಯಗಳನ್ನು ಮಾಡುವ ಶಕ್ತಿಯನ್ನೂ ಇನ್ನೊಬ್ಬನಿಗೆ ಪ್ರವಾದಿಸುವ ಸಾಮರ್ಥ್ಯವನ್ನೂ ಇನ್ನೊಬ್ಬನಿಗೆ ಒಳ್ಳೆಯ ಮತ್ತು ಕೆಟ್ಟ ಆತ್ಮಗಳ ನಡುವೆ ಇರುವ ವ್ಯತ್ಯಾಸವನ್ನು ತಿಳಿದುಕೊಳ್ಳುವ ಸಾಮರ್ಥ್ಯವನ್ನೂ ಕೊಡುತ್ತಾನೆ; ಒಬ್ಬನಿಗೆ ಅನೇಕ ಭಾಷೆಗಳನ್ನು ಮಾತಾಡುವ ಸಾಮರ್ಥ್ಯವನ್ನೂ ಮತ್ತೊಬ್ಬನಿಗೆ ಆ ಭಾಷೆಗಳನ್ನು ಅನುವಾದಿಸುವ ಸಾಮರ್ಥ್ಯವನ್ನೂ ಕೊಡುತ್ತಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತೊಬ್ಬನಿಗೆ ಮಹತ್ಕಾರ್ಯಗಳನ್ನು ಮಾಡುವ ವರವು, ಇನ್ನೊಬ್ಬನಿಗೆ ಪ್ರವಾದನೆಯ ವರವು, ಒಬ್ಬನಿಗೆ ಆತ್ಮವನ್ನು ವಿವೇಚಿಸುವ ವರವು, ಮತ್ತೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ವರವು, ಒಬ್ಬನಿಗೆ ಭಾಷೆಗಳ ಅರ್ಥವನ್ನು ಬಿಡಿಸಿ ಹೇಳುವ ವರವು ಕೊಡಲ್ಪಡುತ್ತದೆ.
Kannada BSI Bible 2016
ಒಬ್ಬನಿಗೆ ಮಹತುಗಳನ್ನು ಮಾಡುವ ವರವು, ಇನ್ನೊಬ್ಬನಿಗೆ ಪ್ರವಾದನೆಯ ವರವು, ಮತ್ತೊಬ್ಬನಿಗೆ ಆತ್ಮಗಳನ್ನು ವಿವೇಚಿಸುವ ವರವು, ಇನ್ನೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ವರವು, ಮತ್ತೊಬ್ಬನಿಗೆ ಭಾಷೆಗಳ ಅರ್ಥವನ್ನು ಹೇಳುವ ವರವು ಕೊಡಲ್ಪಡುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಬ್ಬನಿಗೆ ಮಹತ್ತುಗಳನ್ನು ಮಾಡುವ ವರವು, ಒಬ್ಬನಿಗೆ ಪ್ರವಾದನೆಯ ವರವು, ಒಬ್ಬನಿಗೆ ಸತ್ಯಾಸತ್ಯಾತ್ಮಗಳನ್ನು ವಿವೇಚಿಸುವ ವರವು, ಒಬ್ಬನಿಗೆ ವಿವಿಧ ವಾಣಿಗಳನ್ನಾಡುವ ವರವು, ಒಬ್ಬನಿಗೆ ವಾಣಿಗಳ ಅರ್ಥವನ್ನು ಹೇಳುವ ವರವು ಕೊಡಲ್ಪಡುತ್ತವೆ.
Kannada Bible (KNCL) BSI 2016
ಒಬ್ಬನಿಗೆ ಪವಾಡಗಳನ್ನು ಎಸಗುವ ಪರಾಕ್ರಮವನ್ನು, ಇನ್ನೊಬ್ಬನಿಗೆ ಪ್ರವಾದನೆಮಾಡುವ ಪ್ರತಿಭೆಯನ್ನು, ಮತ್ತೊಬ್ಬನಿಗೆ ಸತ್ಯಾಸತ್ಯವನ್ನು ವಿವೇಚಿಸುವ ಜಾಣ್ಮೆಯನ್ನು, ಮಗದೊಬ್ಬನಿಗೆ ವಿವಿಧ ಭಾಷೆಗಳನ್ನಾಡುವ ಸಾಮರ್ಥ್ಯವನ್ನು, ಮತ್ತೂ ಒಬ್ಬನಿಗೆ ಅವುಗಳನ್ನು ಅರ್ಥೈಸುವ ಅರಿವನ್ನು ಆ ಪವಿತ್ರಾತ್ಮರಿಂದಲೇ ಕೊಡಲಾಗುತ್ತದೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಬ್ಬನಿಗೆ ಅದ್ಭುತಕಾರ್ಯಗಳ ಶಕ್ತಿಯೂ ಒಬ್ಬನಿಗೆ ಪ್ರವಾದನೆಯೂ ಒಬ್ಬನಿಗೆ ಆತ್ಮಗಳನ್ನು ವಿವೇಚಿಸುವ ವರವೂ ಒಬ್ಬನಿಗೆ ವಿವಿಧ ಭಾಷೆಗಳನ್ನಾಡುವ ಶಕ್ತಿಯೂ ಮತ್ತೊಬ್ಬನಿಗೆ ಅನ್ಯಭಾಷೆಗಳ ಅರ್ಥವನ್ನು ಹೇಳುವ ವರವೂ ಕೊಡಲಾಗುತ್ತದೆ.