1 Corinthians 12:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾವು ದೇಹದ ಯಾವ ಅಂಗಗಳನ್ನು ಅಲ್ಪವಾದುವುಗಳೆಂದು ಎಣಿಸುತ್ತೇವೋ ಆ ಅಂಗಗಳ ಬಗ್ಗೆ ಹೆಚ್ಚು ಎಚ್ಚರಿಕೆ ತೆಗೆದುಕೊಳ್ಳುತ್ತೇವೆ. ನಾವು ನಮ್ಮ ಯಾವ ಅಂಗಗಳನ್ನು ತೋರಿಸಬಯಸುವುದಿಲ್ಲವೋ ಆ ಅಂಗಗಳನ್ನು ವಿಶೇಷವಾದ ರೀತಿಯಲ್ಲಿ ಸಂರಕ್ಷಿಸುತ್ತೇವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ನಾವು ದೇಹದಲ್ಲಿ ಅಲ್ಪಮಾನವುಳ್ಳವುಗಳು ಎಂದೆಣಿಸುವ ಭಾಗಗಳಿಗೆ ಉಡಿಗೆಯಿಂದ ಹೆಚ್ಚಾದ ಮಾನವನ್ನು ಕೊಡುವುದುಂಟಲ್ಲಾ. ಹೀಗೆ ಮಾನವಿಲ್ಲದ ಅಂಗಗಳಿಗೆ ಹೆಚ್ಚಾದ ಮಾನವುಂಟಾಗುತ್ತದೆ.
Kannada BSI Bible 2016
ಇದಲ್ಲದೆ ಅಲ್ಪ ಮಾನವುಳ್ಳವುಗಳೆಂದು ನಾವು ಎಣಿಸುವ ದೇಹದ ಅಂಗಗಳಿಗೆ ಹೆಚ್ಚಾದ ಗೌರವವನ್ನು ಕೊಡುತ್ತೇವೆ. ಆಗ ಅಂದವಿಲ್ಲದ ನಮ್ಮ ಅಂಗಗಳು ಹೆಚ್ಚು ಅಂದವಾಗಿರುತ್ತವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ನಾವು ದೇಹದಲ್ಲಿ ಅಲ್ಪಮಾನವುಳ್ಳವುಗಳೆಂದೆಣಿಸುವ ಭಾಗಗಳಿಗೆ ಉಡಿಗೆಯಿಂದ ಹೆಚ್ಚಾದ ಮಾನವನ್ನು ಕೊಡುವದುಂಟಲ್ಲಾ; ಹೀಗೆ ಅಂದವಿಲ್ಲದ ಅಂಗಗಳಿಗೆ ಹೆಚ್ಚಾದ ಅಂದವುಂಟಾಗುತ್ತದೆ.
Kannada Bible (KNCL) BSI 2016
ಅಲ್ಪವೆಂದೆಣಿಸುವ ಅಂಗಗಳನ್ನು ಅಧಿಕವಾಗಿ ಮಾನ್ಯಮಾಡುತ್ತೇವೆ. ಗೋಪ್ಯವಾಗಿಡತಕ್ಕವುಗಳನ್ನು ಶೀಲದಿಂದ ಸಂರಕ್ಷಿಸುತ್ತೇವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಡಿಮೆ ಗೌರವವುಳ್ಳವುಗಳೆಂದು ಯೋಚಿಸುವವುಗಳನ್ನು ವಿಶೇಷ ಗೌರವದಿಂದ ನೋಡುತ್ತೇವೆ. ಬಹಿರಂಗಪಡಿಸದ ಅಂಗಗಳನ್ನು ವಿಶೇಷ ಮರ್ಯಾದೆಯಿಂದ ಸಂರಕ್ಷಿಸುತ್ತೇವೆ.