1 Corinthians 12:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಹು ಸುಂದರವಾದ ಅಂಗಗಳಿಗೆ ಇಂಥ ವಿಶೇಷ ಸಂರಕ್ಷಣೆಯ ಅಗತ್ಯವಿರುವುದಿಲ್ಲ. ಆದರೆ ದೇವರು ಅಂಗಗಳನ್ನು ಒಟ್ಟಾಗಿ ಸೇರಿಸಿದ್ದಾನೆ ಮತ್ತು ಕೊರತೆಯಲ್ಲಿರುವ ಅಂಗಗಳಿಗೆ ಹೆಚ್ಚಿನ ಮಾನ್ಯತೆಯನ್ನು ಕೊಟ್ಟಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಾನವುಳ್ಳ ಅಂಗಗಳಿಗೆ ಏನೂ ಅವಶ್ಯವಿಲ್ಲ. ದೇಹದಲ್ಲಿ ಭೇದವೇನೂ ಇರದೇ ಅಂಗಗಳು ಒಂದಕ್ಕೊಂದರ ಹಿತವನ್ನು ಚಿಂತಿಸುವ ಹಾಗೆ ದೇವರು ಕೊರತೆಯುಳ್ಳದ್ದಕ್ಕೆ ಹೆಚ್ಚಾದ ಮಾನವನ್ನು ಕೊಟ್ಟು ದೇಹವನ್ನು ಹದವಾಗಿ ಜೋಡಿಸಿದ್ದಾನೆ.
Kannada BSI Bible 2016
ಅಂದವುಳ್ಳ ನಮ್ಮ ಅಂಗಗಳಿಗೆ ಯಾವ ಅವಶ್ಯಕತೆಯೂ ಇರುವದಿಲ್ಲ; ಆದರೆ ದೇವರು ಕೊರತೆಯುಳ್ಳ ಅಂಗ ವನ್ನು ಹೆಚ್ಚಾಗಿ ಗೌರವಿಸಿ ದೇಹವನ್ನು ಹದವಾಗಿ ಜೋಡಿಸಿದ್ದಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಂದವುಳ್ಳ ಅಂಗಗಳಿಗೆ ಏನೂ ಅವಶ್ಯವಿಲ್ಲ. ದೇಹದಲ್ಲಿ ಭೇದವೇನೂ ಇರದೆ ಅಂಗಗಳು ಒಂದಕ್ಕೊಂದರ ಹಿತವನ್ನು ಚಿಂತಿಸುವ ಹಾಗೆ ದೇವರು ಕೊರತೆಯುಳ್ಳದ್ದಕ್ಕೆ ಹೆಚ್ಚಾದ ಮಾನವನ್ನು ಕೊಟ್ಟು ದೇಹವನ್ನು ಹದವಾಗಿ ಕೂಡಿಸಿದ್ದಾನೆ.
Kannada Bible (KNCL) BSI 2016
ಬಾಹ್ಯ ಅಂಗಗಳಿಗೆ ಇಂಥ ಸಂರಕ್ಷಣೆ ಅಗತ್ಯವಿರುವುದಿಲ್ಲ. ದೇಹವನ್ನು ನಿರ್ಮಿಸಿದ ದೇವರು ಗೌಣವೆಂದೆಣಿಸಲಾಗುವ ಅಂಗಗಳಿಗೂ ವಿಶೇಷ ಘನತೆಯನ್ನು ಇತ್ತಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾವು ಬಾಹ್ಯ ಅಂಗಗಳಿಗೆ ಹೆಚ್ಚಿನ ವಿಶೇಷತೆಯನ್ನು ಕೊಡುವುದಿಲ್ಲ. ಆದರೆ ಗೌರವ ಕಡಿಮೆಯಿರುವ ಅಂಗಗಳಿಗೆ, ದೇವರು ಹೆಚ್ಚು ಗೌರವವನ್ನು ಕೊಡುವಂತೆ, ಎಲ್ಲಾ ಅಂಗಗಳನ್ನು ಒಟ್ಟಾಗಿ ದೇಹದಲ್ಲಿಟ್ಟಿದ್ದಾರೆ.