1 Corinthians 12:26 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಒಂದು ಅಂಗಕ್ಕೆ ನೋವಾದರೆ, ಉಳಿದೆಲ್ಲ ಅಂಗಗಳು ಅದರೊಂದಿಗೆ ನೋವನ್ನು ಅನುಭವಿಸುತ್ತವೆ. ಒಂದು ಅಂಗಕ್ಕೆ ಸನ್ಮಾನ ದೊರೆತರೆ, ಉಳಿದೆಲ್ಲ ಅಂಗಗಳು ಅದರ ಸನ್ಮಾನದಲ್ಲಿ ಪಾಲುಗಾರರಾಗುತ್ತವೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಒಂದು ಅಂಗಕ್ಕೆ ನೋವಾದರೆ ಎಲ್ಲಾ ಅಂಗಗಳಿಗೂ ನೋವಾಗುತ್ತದೆ. ಒಂದು ಅಂಗ ಗೌರವಿಸಲ್ಪಟ್ಟರೆ ಎಲ್ಲಾ ಅಂಗಗಳಿಗೂ ಸಂತೋಷವಾಗುತ್ತದೆ.
Kannada BSI Bible 2016
ಒಂದು ಅಂಗಕ್ಕೆ ನೋವಾದರೆ ಎಲ್ಲಾ ಅಂಗಗಳಿಗೂ ನೋವಾಗುತ್ತದೆ; ಇಲ್ಲವೆ ಒಂದು ಅಂಗಕ್ಕೆ ಮರ್ಯಾದೆ ಬಂದರೆ ಎಲ್ಲಾ ಅಂಗಗಳಿಗೂ ಸಂತೋಷವಾಗುತ್ತದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಒಂದು ಅಂಗಕ್ಕೆ ನೋವಾದರೆ ಎಲ್ಲಾ ಅಂಗಗಳಿಗೂ ನೋವಾಗುತ್ತದೆ; ಒಂದು ಅಂಗಕ್ಕೆ ಮರ್ಯಾದೆ ಬಂದರೆ ಎಲ್ಲಾ ಅಂಗಗಳಿಗೂ ಸಂತೋಷವಾಗುತ್ತದೆ.
Kannada Bible (KNCL) BSI 2016
ಒಂದು ಅಂಗಕ್ಕೆ ನೋವಾದರೆ, ಎಲ್ಲಾ ಅಂಗಗಳೂ ಅದರೊಂದಿಗೆ ನೋವನ್ನು ಅನುಭವಿಸುತ್ತವೆ. ಒಂದು ಅಂಗಕ್ಕೆ ನಲಿವಾದರೆ, ಮಿಕ್ಕೆಲ್ಲಾ ಅಂಗಗಳು ಅದರೊಡನೆ ಸೇರಿ ನಲಿದಾಡುತ್ತವೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇಹದ ಒಂದು ಅಂಗ ಬಾಧೆಪಟ್ಟರೆ, ಎಲ್ಲಾ ಅಂಗಗಳು ಬಾಧೆಪಡುತ್ತದೆ. ಒಂದು ಅಂಗಕ್ಕೆ ಗೌರವ ದೊರೆತರೆ, ಅದರೊಂದಿಗೆ ಪ್ರತಿಯೊಂದು ಅಂಗವೂ ಆನಂದಪಡುತ್ತವೆ.