1 Corinthians 12:28 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ಸಭೆಯಲ್ಲಿ ಅಪೊಸ್ತಲರಿಗೆ ಮೊದಲನೆಯ ಸ್ಥಾನವನ್ನೂ ಪ್ರವಾದಿಗಳಿಗೆ ಎರಡನೆಯ ಸ್ಥಾನವನ್ನೂ ಉಪದೇಶಕರಿಗೆ ಮೂರನೆಯ ಸ್ಥಾನವನ್ನೂ ಇಟ್ಟಿದ್ದಾನೆ. ಇದಲ್ಲದೆ ದೇವರು, ಅದ್ಭುತಕಾರ್ಯಗಳನ್ನು ಮಾಡುವ ಜನರಿಗೂ ಸ್ಪಸ್ಥಪಡಿಸುವ ಜನರಿಗೂ ಇತರರಿಗೆ ಸಹಾಯಮಾಡುವ ಜನರಿಗೂ ಮುನ್ನಡೆಸಬಲ್ಲ ಜನರಿಗೂ ವಿವಿಧ ಭಾಷೆಗಳನ್ನು ಮಾತಾಡಬಲ್ಲ ಜನರಿಗೂ ಸಭೆಯಲ್ಲಿ ಸ್ಥಾನವನ್ನು ಕೊಟ್ಟಿದ್ದಾನೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವರು ತನ್ನ ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ಇಟ್ಟಿದ್ದಾನೆ. ಆ ಮೇಲೆ ಮಹತ್ಕಾರ್ಯ ಮಾಡುವ ಶಕ್ತಿಯನ್ನು, ನಾನಾ ರೋಗಗಳನ್ನು ವಾಸಿಮಾಡುವ ವರವನ್ನೂ, ಪರಸಹಾಯ ಮಾಡುವ ಗುಣವನ್ನೂ, ಕಾರ್ಯಗಳನ್ನು ನಿರ್ವಹಿಸುವ ಜ್ಞಾನವನ್ನು ಮತ್ತು ವಿವಿಧ ಭಾಷೆಗಳನ್ನಾಡುವ ವರವನ್ನೂ ಅವರವರಿಗೆ ಬೇರೆ ಬೇರೆಯಾಗಿ ಕೊಟ್ಟಿದ್ದಾನೆ.
Kannada BSI Bible 2016
ದೇವರು ಕೆಲವರನ್ನು ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಉಪದೇಶಕರನ್ನು ಇಟ್ಟಿದ್ದಾನೆ; ಆಮೇಲೆ ಮಹತ್ಕಾರ್ಯ ಗಳನ್ನೂ ವಾಸಿಮಾಡುವ ವರಗಳನ್ನೂ ಸಹಾಯ ಮಾಡುವದನ್ನೂ ಕಾರ್ಯಗಳನ್ನು ನಿರ್ವಹಿಸುವದನ್ನೂ ವಿವಿಧ ಭಾಷೆಗಳನಾ
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವರು ತನ್ನ ಸಭೆಯಲ್ಲಿ ಮೊದಲನೇದಾಗಿ ಅಪೊಸ್ತಲರನ್ನು, ಎರಡನೇದಾಗಿ ಪ್ರವಾದಿಗಳನ್ನು, ಮೂರನೇದಾಗಿ ಉಪದೇಶಕರನ್ನು ಇಟ್ಟಿದ್ದಾನೆ; ಆಮೇಲೆ ಮಹಾತ್ಕಾರ್ಯ ಮಾಡುವ ಶಕ್ತಿಯನ್ನೂ ನಾನಾ ರೋಗಗಳನ್ನು ವಾಸಿಮಾಡುವ ವರವನ್ನೂ ಪರಸಹಾಯ ಮಾಡುವ ಗುಣವನ್ನೂ ಕಾರ್ಯಗಳನ್ನು ನಿರ್ವಹಿಸುವ ಜ್ಞಾನವನ್ನೂ ವಿವಿಧ ವಾಣಿಗಳನ್ನಾಡುವ ವರವನ್ನೂ ಅವರವರಿಗೆ ಕೊಟ್ಟಿದ್ದಾನೆ.
Kannada Bible (KNCL) BSI 2016
ದೇವರು ತಮ್ಮ ಸಭೆಯಲ್ಲಿ, ಮೊದಲನೆಯದಾಗಿ ಪ್ರೇಷಿತರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ನೇಮಿಸಿದ್ದಾರೆ. ಅನಂತರ ಪವಾಡಗಳನ್ನು ಎಸಗುವವರನ್ನು, ರೋಗಗಳನ್ನು ಗುಣಪಡಿಸುವವರನ್ನು, ಪರೋಪಕಾರಿಗಳನ್ನು, ಪರಿಪಾಲಕರನ್ನು, ಬಹುಭಾಷಾಪಂಡಿತರನ್ನು ನೇಮಿಸಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇವರು ತಮ್ಮ ಸಭೆಯಲ್ಲಿ ಮೊದಲನೆಯದಾಗಿ ಅಪೊಸ್ತಲರನ್ನು, ಎರಡನೆಯದಾಗಿ ಪ್ರವಾದಿಗಳನ್ನು, ಮೂರನೆಯದಾಗಿ ಬೋಧಕರನ್ನು ನೇಮಿಸಿದ್ದಾರೆ. ಅನಂತರ ಅದ್ಭುತಕಾರ್ಯಗಳನ್ನು ಮಾಡುವವರನ್ನು, ರೋಗಗಳನ್ನು ಗುಣಪಡಿಸುವ ವರವನ್ನು, ಪರೋಪಕಾರಿಗಳನ್ನು, ಆಡಳಿತಗಾರರನ್ನು, ವಿವಿಧ ವಾಣಿಗಳನ್ನಾಡುವವರನ್ನು ನೇಮಿಸಿದ್ದಾರೆ.